Breaking News

ಉತ್ತರ ಕನ್ನಡ: ಜಿಲ್ಲೆಯಲ್ಲಿ ಮಂಗನ ಕಾಯಿಲೆ(Monkey Disease) ಹಾವಳಿ ಹೆಚ್ಚಾಗಿದೆ

Spread the love

ಉತ್ತರ ಕನ್ನಡ: ಜಿಲ್ಲೆಯಲ್ಲಿ ಮಂಗನ ಕಾಯಿಲೆ(Monkey Disease) ಹಾವಳಿ ಹೆಚ್ಚಾಗಿದೆ. ಅದು ಅಲ್ಲದೆ ಇಷ್ಟು ದಿನ ಕೇವಲ ಸಿದ್ದಾಪುರಕ್ಕೆ ಮಾತ್ರ ಸೀಮಿತವಾಗಿದ್ದಮಂಗನ ಕಾಯಿಲೆ, ಇದೀಗ ಅಂಕೋಲಾ(Ankola) ತಾಲೂಕಿಗೆ ವ್ಯಾಪಿಸಿದೆ. ತಾಲೂಕಿನ ಮಾವಿನಕೇರಿ ಗ್ರಾಮದ ವ್ಯಕ್ತಿಯಲ್ಲಿ ಕಾಯಿಲೆ ಕಂಡು ಬಂದಿದೆ. ಕಾಡಿನಂಚಿನಲ್ಲಿರುವ ಜಮೀನಿನಲ್ಲಿ ಕೃಷಿ ಕೆಲಸ ಮಾಡಿಕೊಂಡಿರುವ ವ್ಯಕ್ತಿಗೆ ಎಲ್ಲೋ ಕಾಡಿನಲ್ಲಿ ಮಂಗ ಸಾವನಪ್ಪಿರುವ ಹಿನ್ನೆಲೆ ಈ ಕಾಯಿಲೆ ಕಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಇದರಿಂದ ಜಿಲ್ಲೆಯ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಾಗಿದೆ.

ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ 2 ಸಾವು, 46 ಪ್ರಕರಣ ಪತ್ತೆ

ಇನ್ನು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಮಂಗನ ಕಾಯಿಲೆಯಿಂದ ಇಬ್ಬರು ಸಾವನ್ನಪ್ಪಿದ್ದರೆ, 46 ಪ್ರಕರಣಗಳು ಪತ್ತೆಯಾಗಿದೆ. ಅದರಲ್ಲಿ ಸಿದ್ದಾಪುರ ತಾಲೂಕಿನಲ್ಲಿಯೇ 45 ಹಾಗೂ ಅಂಕೊಲಾ ತಾಲೂಕಿನಲ್ಲಿ 1 ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನಲೆ ಆರೋಗ್ಯ ಇಲಾಖೆ ಸಿಬ್ಬಂದಿ, ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮುಂದುವರೆಸಿದ್ದಾರೆ. ಆದರೆ, ಸಾರ್ವಜನಿಕರು ಮಾತ್ರ, ‘ನಿಮ್ಮ ಮುಂಜಾಗೃತೆ ಬೇಡ ನಮಗೆ, ಲಸಿಕೆ ಕೊಡಿ ಎನ್ನುತ್ತಿದ್ದಾರೆ.

ಅಂಕೋಲಾ ತಾಲೂಕಿಗೆ ವ್ಯಾಪಿಸಿದ ಮಂಗನ ಕಾಯಿಲೆ- ಜಿಲ್ಲೆಯ ಜನರಲ್ಲಿ ಹೆಚ್ಚಿದ ಆತಂಕ

ಇದೇ ಫೆ.26 ರಂದು ಮಂಗನ ಕಾಯಿಲೆಗೆ 2ನೇ ಬಲಿಯಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈ ಗ್ರಾಮದ 60 ವರ್ಷದ ವೃದ್ಧೆ ಮಂಗನ ಕಾಯಿಲೆಗೆ ಬಲಿಯಾಗಿದ್ದರು. 20 ದಿನದಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆಯನ್ನು ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದರು. ಈ ಮೂಲಕ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಈ ವರ್ಷದ ಎರಡನೇ ಸಾವು ಸಂಭವಿಸಿತ್ತು.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ