Breaking News

ತಾಯಿ ಕಣ್ಣೇದರು ಒದ್ದಾಡಿ ಜೀವ ಬಿಟ್ಟ ಮಗ

Spread the love

ಉಡುಪಿ: ಯುವಕನೊಬ್ಬ ತಾಯಿಯನ್ನು ಕೂರಿಸಿಕೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಎದುರಿಗೆ ಇದ್ದ ಟೆಂಪೋಗೆ ಡಿಕ್ಕಿ (Road Accident) ಹೊಡೆದಿದ್ದಾನೆ. ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಕುಳಿತ್ತಿದ್ದ ಮಹಿಳೆಗೆ ತೀವ್ರ ಗಾಯವಾಗಿದೆ.

 

ಉದ್ಯಾವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ಸಂಭವಿಸಿದೆ. ಉಚ್ಚಿಲ ಪೊಲ್ಯ ಮೂಲದ ಪಡುಬಿದ್ರೆ ಕನ್ನಂಗಾರು ನಿವಾಸಿ ಮುಫ್ರೀನ್ (18) ಮೃತ ದುರ್ದೈವಿ. ಮುಫ್ರೀನ್‌ ತಾಯಿ ಹಾಜಿರಾ ಅವರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಅಮ್ಮ-ಮಗ ಸ್ಕೂಟರ್‌ನಲ್ಲಿ ಕಟಪಾಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದರು. ಈ ವೇಳೆ ಟೆಂಪೋಗೆ ಸ್ಕೂಟರ್‌ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬೈಕ್‌ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿತ್ತು. ಅಪಘಾತದಲ್ಲಿ ಗಾಯಗೊಂಡ ಮುಫ್ರೀನ್‌ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಕಾಪು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ