Breaking News

ಲೋಕಸಭೆ ಚುನಾವಣೆ 2024: ಮಾ. 4, 5 ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಬೆಳಗಾವಿ ಜಿಲ್ಲೆ ಪ್ರವಾಸ

Spread the love

ಬೆಳಗಾವಿ, ಮಾರ್ಚ್​ 03: ಲೋಕಸಭೆ ಚುನಾವಣೆಗೆ (Lok Sabha Election) ಎರಡು ತಿಂಗಳು ಬಾಕಿ ಉಳಿದಿದೆ. ಭಾರತೀಯ ಜನತಾ ಪಾರ್ಟಿ (BJP) ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಅದು ಕೂಡ ಈ ಸಲ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅಭೂತಪೂರ್ವ ಗೆಲವು ಸಾಧಿಸಲು ರಣತಂತ್ರ ಹೆಣೆಯುತ್ತಿದೆ. ಬಿಜೆಪಿ ಈಗಾಗಲೆ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಈ ಪಟ್ಟಿಯಲ್ಲಿ ಕಾರ್ನಾಟಕದ ಯಾವೊಬ್ಬ ಅಭ್ಯರ್ಥಿಯ ಹೆಸರು ಇಲ್ಲ. ಇದು ರಾಜ್ಯ ಬಿಜೆಪಿ ನಾಯಕರಿಗೆ ಸ್ವಲ್ಪ ಮಟ್ಟಿಗೆ ತಲೆನೋವಾಗಿದೆ. ಈ ಮಧ್ಯೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ (JP Nadda) ಸೋಮವಾರ (ಮಾ.04) ರಂದು ಬೆಳಗಾವಿಗೆ (Belagavi) ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ನಾಯಕರು ಮಾಹಿತಿ ನೀಡಿದ್ದಾರೆ.

ಲೋಕಸಭೆ ಚುನಾವಣೆ 2024: ಮಾ. 4, 5 ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಬೆಳಗಾವಿ ಜಿಲ್ಲೆ ಪ್ರವಾಸ

ಸೋಮವಾರ ರಾತ್ರಿ 8 ಗಂಟೆಗೆ ಬೆಳಗಾವಿ ಸಾಂಬ್ರಾ ಏರ್​ಪೋರ್ಟ್​ಗೆ ಆಗಮಿಸುವ ನಡ್ಡಾ, ಬೆಳಗಾವಿಯ ‌ಐಟಿಸಿ ವೆಲ್​ಕಮ್​​​​​ ಹೋಟೆಲ್​ನಲ್ಲಿ ರಾತ್ರಿ 9 ಗಂಟೆಗೆ ನಾಲ್ಕು (ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ) ಲೋಕಸಭಾ ಕ್ಷೇತ್ರಗಳ ಕೋರ್​ ಕಮಿಟಿ ಸದಸ್ಯರ ಜೊತೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಟಿಕೆಟ್ ಆಕಾಂಕ್ಷಿಗಳು, ಸಂಸದರು, ಶಾಸಕರು, ಪ್ರಮುಖರು ಭಾಗಿಯಾಗಲಿದ್ದಾರೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ