Breaking News
Home / ರಾಜಕೀಯ / ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಮತ್ತೆ ಏರುಪೇರು

ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಮತ್ತೆ ಏರುಪೇರು

Spread the love

ವಿಜಯಪುರ,: ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ (BJP MP ramesh jigajinagi) ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ.

ಈ ಹಿನ್ನೆಲೆಯಲ್ಲಿ ಅವರನ್ನು ನಿನ್ನೆ (ಮಾರ್ಚ್​ 2) ತಡ ರಾತ್ರಿ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ಕಳೆದ ಜನವರಿ 28ರಂದು ಸಹ ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಉಸಿರಾಟ ಸಮಸ್ಯೆಯಾಗಿತ್ತು. ಕೂಡಲೇ ಅವರನ್ನು ಬಾಗಲಕೋಟೆ ‌ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮತ್ತೆ ರಮೇಶ್ ಜಿಗಜಿಣಗಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.

 

ನಿನ್ನೆ ತಡ ರಾತ್ರಿ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ, ಆಸ್ಪತ್ರೆ ವೈದ್ಯರು, ಯಾರ ಭೇಟಿಗೂ ಅವಕಾಶ ಮಾಡಿಕೊಡುತ್ತಿಲ್ಲ. ನಿನ್ನೆ ಆಸ್ಪತ್ರೆ ಭೇಟಿ ಸಂದರ್ಭದಲ್ಲಿ ಒಳಗಡೆ ಬಿಟ್ಟಿಲ್ಲ. ಇಂದು ಮತ್ತೆ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತೇವೆ ಎಂದ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ತಿಳಿಸಿದ್ದಾರೆ.


Spread the love

About Laxminews 24x7

Check Also

ತಾಯಿಯ ಎದೆ ಹಾಲನ್ನು ಹೆಚ್ಚಿಸಲು ಈ ಗಿಡಮೂಲಿಕೆ ಬಳಸಿ

Spread the loveಭೂಮಿಯ ಮೇಲೆ ಹಲವಾರು ರೀತಿಯ ಔಷಧೀಯ ಗಿಡಗಳಿವೆ. ಇದರಿಂದಾಗಿ ಅವುಗಳನ್ನು ವಿವಿಧ ಔಷಧಿಗಳು ಮತ್ತು ಪರಿಹಾರ ಕ್ರಮಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ