Breaking News

ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಗೆ ಅಧಿಸೂಚನೆ ಹೊರಡಿಸಿ ಮೂರು ದಿನ ಕಳೆದರೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ

Spread the love

ಬೆಂಗಳೂರು, ನ.14- ರಾಜ್ಯ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಗೆ ಅಧಿಸೂಚನೆ ಹೊರಡಿಸಿ ಮೂರು ದಿನ ಕಳೆದರೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ನವೆಂಬರ್ 11ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಕಳೆದ ಮೂರು ದಿನಗಳಲ್ಲಿ ಯಾವುದೇ ಪಕ್ಷ ಅಥವಾ ಯಾವೊಬ್ಬ ಅಭ್ಯರ್ಥಿಯೂ ಉಮೇದುವಾರಿಕೆ ಸಲ್ಲಿಸಿಲ್ಲ.

ರಾಜ್ಯಸಭಾ ಸದಸ್ಯರಾಗಿದ್ದ ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಭಾರತದ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದೆ. ಡಿಸೆಂಬರ್ 1ರಂದು ರಾಜ್ಯಸಭೆಗೆ ಮತದಾನ ನಡೆಯಬೇಕಿದೆ. ಆದರೆ, ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳು ಈ ಚುನಾವಣೆ ಬಗ್ಗೆ ಯಾವುದೇ ಚರ್ಚೆ ಮಾಡಿದಂತೆ ಕಂಡುಬಂದಿಲ್ಲ.ಆಡಳಿತಾರೂಢ ಬಿಜೆಪಿಗೆ ರಾಜ್ಯಸಭೆ ಚುನಾವಣೆ ಸುಲಭ ಗೆಲುವಾಗಲಿದೆ. ಹೀಗಾಗಿ ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಚುನಾವಣೆಗೆ ಸ್ಪರ್ಧಿಸಿ ತಟಸ್ಥ ನಿಲುವು ತಳೆಯುವ ಸಾಧ್ಯತೆಗಳು ಹೆಚ್ಚಾಗಿವೆ. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಮತಗಳನ್ನು ಒಟ್ಟುಗೂಡಿಸಿದರೂ ಬಿಜೆಪಿ ಮತಗಳಿಗಿಂತ ಕಡಿಮೆಯಾಗಲಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ