ಕಾಗವಾಡ : ತಾಲೂಕಿನ ಐನಾಪುರ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ 14 ಜನರ ಮೇಲೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.
ಮಹಿಳೆಯ ಕುಟುಂಬಕ್ಕೆ ರಾಜ್ಯ ಸರ್ಕಾರ 1991ರಲ್ಲಿ ಮೂರು ಎಕರೆ ಜಮೀನು ಮಂಜೂರು ಮಾಡಿತ್ತು. ಸರ್ಕಾರ ನೀಡಿದ್ದ ಜಮೀನಿನಲ್ಲೇ ಬಡ ಕುಟುಂಬ ಬದುಕು ಸಾಗಿಸುತ್ತಿತ್ತು. ಆದರೆ ಗ್ರಾಮದ ಕೆಲವರು 20 ಗುಂಟೆ ಜಾಗ ಅತಿಕ್ರಮಣ ಮಾಡಿಕೊಂಡು ಮಹಿಳೆ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿದ್ದರು. ಸಧ್ಯ ಈ ಘಟನೆ ಹೊರಬೀಳುತ್ತಿದ್ದರೆ ಪೊಲೀಸರು 15 ಜನರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.