Breaking News

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಎಫ್​ಎಸ್​ಎಲ್​ ವರದಿಯಲ್ಲಿ ಬಹಿರಂಗ: ಪರಮೇಶ್ವರ್​​

Spread the love

ಬೆಂಗಳೂರು, ಮಾರ್ಚ್​ 05: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್​ ಘೋಷಣೆ (Vidhana Soudha Pro Pakistan Slogan) ಕೂಗಿರುವುದು ವಿಧಿ ವಿಜ್ಞಾನ ಪ್ರಯೋಗಾಲಯ (FSL)​ ವರದಿ​​ಯಲ್ಲಿ ದೃಢವಾಗಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಮತ್ತು ವರದಿಯಲ್ಲಿ ಯಾರು ಕೂಗಿದ್ದಾರೆಂಬುವುದು ಬಹಿರಂಗೊಂಡಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ (G Parmeshwar)​ ಹೇಳಿದರು.

 

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದರಿಂದ ಸರ್ಕಾರಕ್ಕೆ ಯಾವುದೇ ಮುಜುಗರವಾಗುವುದಿಲ್ಲ. ಇದನ್ನು ನಮ್ಮ ಸರ್ಕಾರ ಹೇಳಿ ಮಾಡಿಸಿರುವುದು ಅಲ್ಲ. ಯಾವುದೇ ಮುಲಾಜಿಲ್ಲದೆ ಕ್ರಮಕೈಗೊಂಡಿದ್ದೇವೆ ಎಂದರು.

 

ನಾನು ಹೇಳುತ್ತಿದ್ದೆ ಎಫ್​ಎಸ್​ಎಲ್​ ವರದಿ ಬರಲಿ ಕ್ರಮ ಕೈಗೊಳ್ಳುತ್ತೇವೆ ಅಂತ. ಖಾಸಗಿಯವರು ಕೂಡ ಎಫ್​ಎಸ್​ಎಲ್​​ ವರದಿ ಬಿಡುಗಡೆ ಮಾಡಿದ್ದರು. ಆದರೆ ಇದನ್ನು ಅಧಿಕೃತ ಅಂತ ಹೇಳಲು ಆಗಲ್ಲ. ನಮ್ಮ ಗೃಹ ಇಲಾಖೆಯ ಎಫ್​ಎಸ್​ಎಲ್​ ವರದಿ ಆಧಾರದ ಮೇಲೆ ಬಂಧನ ಮಾಡಿದ್ದೇವೆ‌. ಪೊಲೀಸರು ಮುಂದಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.


Spread the love

About Laxminews 24x7

Check Also

ಸ್ವಚ್ಛತಾ ರಾಯಭಾರಿಯಾಗಿ ದೇಶದ ಗಮನ ಸೆಳೆದಿದ್ದ ಪೆರುವಾಯಿ ಗ್ರಾಪಂ ಅಧ್ಯಕ್ಷೆ ನೆಫೀಸಾ ಲೋಕಾಯುಕ್ತ ಬಲೆಗೆ

Spread the loveಬಂಟ್ವಾಳ: ಕಸ ಸಂಗ್ರಹಣಾ ವಾಹನವನ್ನು ತಾವೇ ಚಲಾಯಿಸುವ ಮೂಲಕ ಗಮನ ಸೆಳೆದು, ಕಳೆದ ವರ್ಷ ದೆಹಲಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ