Breaking News

ಕರ್ನಾಟಕ ಉಗ್ರಾಣ ನಿಗಮ ಅಧ್ಯಕ್ಷರ ನೇಮಕ: ನಕಲಿ ಆದೇಶ ಪ್ರತಿ ಸೃಷ್ಟಿಸಿದ ಕಿರಾತಕರು!

Spread the love

ಯಾದಗಿರಿ, (ಮಾರ್ಚ್ 05): ಉಗ್ರಾಣ ನಿಗಮ ಅಧ್ಯಕ್ಷ (Karnataka Warehousing Corporation President) ನೇಮಕ ಮಾಡಿರುವ ನಕಲಿ ಆದೇಶ ಪತ್ರ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ. 

ಈ ನಕಲಿ ನೇಮಕಾತಿ ಆದೇಶ ಪ್ರತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುವ ರೀತಿಯಲ್ಲೇ ಸಹಿ ಮಾಡಲಾಗಿದೆ. ಹೌದು.. ಸಿದ್ದರಾಮಯ್ಯ ಅವರು ನೇಮಕ ಮಾಡಿ ಆದೇಶ ಹೊರಡಿಸಿರುವಂತೆ ನಕಲಿ ಆದೇಶ ಪ್ರತಿ ಸೃಷ್ಟಿಸಿದ್ದಾರೆ.

ಕರ್ನಾಟಕ ಉಗ್ರಾಣ ನಿಗಮ ಅಧ್ಯಕ್ಷರ ನೇಮಕ: ನಕಲಿ ಆದೇಶ ಪ್ರತಿ ಸೃಷ್ಟಿಸಿದ ಕಿರಾತಕರು!

ಯಾದಗಿರಿ ಕ್ಷೇತ್ರದ ಕಾಂಗ್ರೆಸ್ ಮುಖಂಡ ಎ.ಸಿ. ಕಾಡ್ಲೂರ್ ಅವರನ್ನು ಉಗ್ರಾಣ ನಿಗಮ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಹೊರಡಿಸಿರುವ ನಕಲಿ ಆದೇಶ ಪ್ರತಿ ವೈರಲ್ ಆಗಿದೆ. ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್​ ಅವರ ನಿಧನದಿಂದ ತೆರವಾದ ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನಕ್ಕೆ ಸರ್ಕಾರ ಹೊಸಬರನ್ನು ನೇಮಕ ಮಾಡಿಲ್ಲ.

ಆದರೂ ಸಹ ಸಿದ್ದರಾಮಯ್ಯರ ಹೆಸರಲ್ಲಿ ಸೃಷ್ಟಿಸಿರುವ ನಕಲಿ ಆದೇಶ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


Spread the love

About Laxminews 24x7

Check Also

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

Spread the loveಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ನಂದಿಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ