ಬೆಳಗಾವಿ, : 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ ಬೃಹತ್ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ನೀಡಿದ್ದನ್ನು ಮರೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಟ್ಟಲಗಿಯ ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಲಕ್ಷ್ಮಣ್ ಸವದಿಗೆ ಸದ್ಯದಲ್ಲೇ ಒಳ್ಳೆ ಭವಿಷ್ಯ ಇದೆ ಎಂದು ಭರವಸೆ ನೀಡಿದ ಸಿಎಂ, ಈ ಯೋಜನೆಯಿಂದ ಎರಡು ರೀತಿಯ ಲಾಭ ಆಗಲಿದೆ.
ಮೊದಲಿಗೆ ಒಣ ಭೂಮಿ ಇರುವ ಜಮೀನುಗಳಿಗೆ ನೀರು ಒದಗುತ್ತದೆ. ಎರಡನೆಯದಾಗಿ ಕೆರೆಗಳಿಗೆ ನೀರು ತುಂಬಿಸುವುದರಿಂದ ಅಂತರ್ಜಲ ಅಭಿವೃದ್ಧಿ ಕೂಡ ಆಗುತ್ತದೆ ಎಂದು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಉದಾಹರಣೆಗಳನ್ನು ನೀಡಿ ವಿವರಿಸಿದರು. ಕೇಂದ್ರದ ಹಾಲಿ ಸರ್ಕಾರ ಮತ್ತು ರಾಜ್ಯದಲ್ಲಿ ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ರಾಜ್ಯದ ಯಾವ ನೀರಾವರಿ ಯೋಜನೆಗಳಿಗೂ ಬೆಂಬಲ ನೀಡಲಿಲ್ಲ. ಕೃಷ್ಣ ಮೇಲ್ದಂಡೆ, ಮಹದಾಯಿ, ಭದ್ರಾ ಮೇಲ್ದಂಡೆ, ಮೇಕೆದಾಟು ಯೋಜನೆಗಳಿಗೆ ಕೇಂದ್ರ ಒಂಚೂರು ಸಹಕಾರ ನೀಡುತ್ತಿಲ್ಲ