ಮಾ.10 ರಿಂದ ಹತ್ತು ದಿನ ಎಸ್ಕಾಂಗಳ ಆನ್‌ಲೈನ್ ಸೇವೆ ಬಂದ್
Laxminews 24x7
ಮಾರ್ಚ್ 7, 2024
Uncategorized
87 Views
ಇಂಧನ ಇಲಾಖೆಯ ಸಾಫ್ಟ್ವೇರ್ ಅಪ್ಡೇಟ್ ಹಿನ್ನೆಲೆಯಲ್ಲಿ ಮಾರ್ಚ್ 10ರಿಂದ ಒಟ್ಟು 10ದಿನಗಳ ಕಾಲ ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಸೆಸ್ಕಾಂ, ಮೆಸ್ಕಾಂ, ಜೆಸ್ಕಾಂ, ಹೆಸ್ಕಾಂ ಆನ್‌ಲೈನ್ ಸೇವೆಗಳು ಇರುವುದಿಲ್ಲ.
ಹಾಗಾದ್ರೆ, ಯಾವ ವಿದ್ಯುತ್ ಸರಬರಾಜು ಕಂಪನಿಗಳ ಯಾವ ನಗರಗಳಲ್ಲಿ ಆನ್‌ಲೈನ್ ಸೇವೆ ಇರುವುದಿಲ್ಲ ಎನ್ನುವ ವಿವರ ಈ ಕೆಳಗಿನಂತಿದೆ.

ಇಂಧನ ಇಲಾಖೆಯ ಸಾಫ್ಟ್ವೇರ್ ಅಪ್ಡೇಟ್ ಹಿನ್ನೆಲೆಯಲ್ಲಿ ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆಗಳು (Escom Online Services) ಗ್ರಾಹಕರಿಗೆ ಲಭ್ಯವಿರುವುದಿಲ್ಲ ಎಂದು ಇಂಧನ ಇಲಾಖೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ, ಹೆಸರು ಬದಲಾವಣೆ ಸೇರಿದಂತೆ ಯಾವುದೇ ಆನ್ ಲೈನ್ ಸೇವೆಗಳು ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ.