ಚಿತ್ರದುರ್ಗ, ಮಾರ್ಚ್ 7: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವವೇ ಇಲ್ಲ. ರಾಹುಲ್ ಗಾಂಧಿ (Rahul Gandhi) ನಾಯಿಯನ್ನು ಜತೆಗೆ ಕರೆದೊಯ್ಯುತ್ತಾರೆ.
ನಾಯಿ ತಿನ್ನದ ಬಿಸ್ಕತ್ತು ಕಾರ್ಯಕರ್ತರಿಗೆ ನೀಡುತ್ತಾರೆ ಎಂದು ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್ ವಾಗ್ದಾಳಿ ಮಾಡಿದ್ದಾರೆ. ಲೋಕಸಭಾ ಕ್ಷೇತ್ರದ ಬಿಜೆಪಿ ಭೂತ್ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 10 ತಿಂಗಳಲ್ಲಿ 500 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯ ಸಂಗತಿ. ರೈತರಿಗೆ ನೀಡುವ ಸಬ್ಸಿಡಿ ಮತ್ತಿತರೆ ಯೋಜನೆಗಳು ನೀಡಿಲ್ಲ. ಸಿಎಂ ಸಿದ್ಧರಾಮಯ್ಯ ಘೋಷಿಸಿದ ಗ್ಯಾರಂಟಿ ಪೂರ್ಣಗೊಳಿಸಿಲ್ಲ. ಬದಲಿಗೆ ಪ್ರಧಾನಿ ಮೋದಿ ನೀಡಿದ ಗ್ಯಾರಂಟಿ ಪೂರ್ಣಗೊಳಿಸಿದ್ದಾರೆ ಎಂದು ಹೇಳಿದ್ದಾರೆ