Breaking News

ಅಂಜಲಿ ನಿಂಬಾಳ್ಕರ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಅನಂತ್ ಕುಮಾರ್ ಹೆಗಡೆ

Spread the love

ಬೆಳಗಾವಿ, ಮಾ.8: ಉತ್ತರ ಕನ್ನಡದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ (Anantkumar Hegde) ಅವರು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಸಂಪಗಾಂವ ಗ್ರಾಮದಲ್ಲಿ ಸಿದ್ದರಾಮಯ್ಯ (Siddaramaiah) ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ, ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಇಲ್ಲ. ಚುನಾವಣೆಗೆ ಸ್ಪರ್ಧಿಸಿದರೆ ಎಂದರೆ ಕರಿಮಣಿ ಮಾಲೀಕ ನಾನಲ್ಲಾ ಎನ್ನುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಲ್ಲ. ಕಾಂಗ್ರೆಸ್​ನಲ್ಲಿದ್ದ ಪದಾಧಿಕಾರಿಗಳು ಹೋಗಿ ನೀವು ನಿಲ್ಲಿರಿ ಅಂದರೆ ಕರಿಮನಿ ಮಾಲೀಕ ನಾನಲ್ಲಾ ಎಂದು ಹೇಳುತ್ತಾರೆ. ನಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸಲು ಯಾರು ಒಲ್ಲೆ ಎನ್ನುತ್ತಿದ್ದಾರೆ. ಕರಿಮಣಿ ಮಾಲೀಕ ನಾನಲ್ಲ ಎಂದು ಹೇಳುತ್ತಿದ್ದಾರೆ. ಆದರೂ ಯಾರಿಗಾದರೂ ಒಬ್ಬರಿಗೆ ಕರಿಮಣಿ ಕಟ್ಟಿಸುತ್ತಾರೆ ಬಿಡಿ ಎಂದು ವ್ಯಂಗ್ಯವಾಡಿದರು.

ಮತ್ತೆ ಯಾರು ಸಿಗುವುದಿಲ್ಲಾ ಅಂತಾ ಖಾನಾಪುರದಲ್ಲಿ ರಿಜೆಕ್ಟೆಡ್ ಮಟೀರಿಯಲ್ ಇದೆ, ಅದನ್ನ ತಗೊಂಡ ಹೋಗಿ‌ ನಿಲ್ಲಿಸುತ್ತಾರೆ. ಖಾನಾಪುರದ ರಿಜೆಕ್ಟೆಡ್ ಮಟಿರಿಯಲ್ ನಮ್ಮ ಕ್ಷೇತ್ರದ ಅಭ್ಯರ್ಥಿ.

ಖಾನಾಪುರದಿಂದ ಜನ ತಿರಸ್ಕಾರ ಮಾಡಿ ಓಡಿಸಿದ್ದಾರೆ, ಎಲ್ಲಾ ಅಡ್ಡಾಡಿಸುತ್ತಿದ್ದಾರೆ. ಸಿದ್ದರಾಮಯ್ಯನವರು ಕರೆದುಕೊಂಡು ಓಡಾಡುತ್ತಿದ್ದಾರೆ. ಯಾರೇ ಆಗಲಿ ಕಾಂಗ್ರೆಸ್​ಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದು ಖಾನಾಪುರ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಮೋದಿಯವರ ಪರವಾಗಿ ಜನ ವೋಟ್ ಹಾಕಲು ಸಿದ್ಧರಾಗಿದ್ದಾರೆ. ನಾವು ಹೋಗಿ ಒಂದು ಸಾರಿ ಪ್ರೀತಿಯಿಂದ ಕೇಳಿದರೆ‌ ಸಾಕು ಜನ ವೋಟ್ ಕೊಡುತ್ತಾರೆ ಎಂದು ಹೇಳಿದ ಹೆಗಡೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ