ಬಾಗಲಕೋಟೆ, ಮಾರ್ಚ್.08: ಯುವಕರ ಗುಂಪೊಂದು ವಿದ್ಯಾರ್ಥಿನಿಯರನ್ನು (Student) ಚುಡಾಯಿಸಿ, ಹಲ್ಲೆ ಮಾಡಿದ್ದು ಹಲ್ಲೆಗೊಳಗಾದ (Assault) ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಾಗಲಕೋಟೆ (Bagalkot) ಜಿಲ್ಲೆಯ ರಬಕವಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿನಿ (ಸ್ವಾತಿ ನಡಕಟ್ಟಿ) ಆಸ್ಪತ್ರೆಗೆ ದಾಖಲಾಗಿದ್ದಾಳೆ. ಬುಧವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಅನ್ವರ್ ಮಕಾಂದಾರ್, ಆಯನ್ ಪಟೇಲ್, ಜಾವೀದ್ ಅಲಿಹ್ಮದ್ ಎಂಬ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ಹಲ್ಲೆಗೊಳಗಾದ ಯುವತಿ ಸ್ವಾತಿ ತನ್ನ ಸ್ನೇಹಿತೆಯರಾದ ಸಾಕ್ಷಿ, ಕವಿತಾ ಜೊತೆ ಕಾಲೇಜಿಗೆ ತೆರಳಲು ಬಸ್ಗಾಗಿ ಕಾಯುತ್ತಿದ್ದಳು. ಈ ವೇಳೆ ಬಂದ ಯುವಕರು ಯುವತಿಯನ್ನು ಚುಡಾಯಿಸಿದ್ದಾರೆ. ಹಾಗೂ ಹಲ್ಲೆ ಮಾಡಿದ್ದಾರೆ. ಬಸ್ಗಾಗಿ ಕಾದು ನಿಂತಿದ್ದ ವಿದ್ಯಾರ್ಥಿನಿಯರ ಫೋಟೋ ಕ್ಲಿಕ್ಕಿಸಿ, ಬಳಿಕ ಅವರ ಬಳಿ ತೆರಳಿ ಮೊಬೈಲ್ ನಂಬರ್ ನೀಡುವಂತೆ ಪೀಡಿಸಿದ್ದಾರೆ. ನಂಬರ್ ಕೊಡಲು ನಿರಾಕರಿಸಿದ್ದಕ್ಕೆ ಸ್ವಾತಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಘಟನೆ ಸಂಬಂಧ ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಿಂದೂಪರ ಸಂಘಟನೆ ಪ್ರತಿಭಟನೆ ನಡೆಸಿದೆ. ಸದ್ಯ ಚುಡಾಯಿಸಿದ ಯುವಕರನ್ನು ತೇರದಾಳ ಪೊಲೀಸರು ಬಂಧಿಸಿದ್ದಾರೆ
Laxmi News 24×7