Breaking News

ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್

Spread the love

ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್ ಬಿದ್ದಿದೆ (Karnataka Electric Bike Taxi Scheme). ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಹಿಂದಿನ ಬಿಜೆಪಿ (BJP) ಸರ್ಕಾರ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿಗೆ 2021ರ ಜುಲೈ 14ರಂದು ಅನುಮತಿ ನೀಡಿತ್ತು. ಆದರೆ ಇಂದಿನ ಕಾಂಗ್ರೆಸ್ (Congress) ಸರ್ಕಾರ ಹಿಂದಿನ ಸರ್ಕಾರ ನೀಡಿದ್ದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಅನುಮತಿಯನ್ನು ವಾಪಸ್ಸು ಪಡೆದುಕೊಂಡಿದೆ.

ಬಿಎಂಆರ್​ಸಿಎಲ್ (BMRCL) ಎಂಡಿ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯ ವರದಿಯಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯು ಮೋಟಾರ್ ವಾಹನ ಕಾಯ್ದೆಗೆ ಪೂರಕವಾಗಿಲ್ಲ ಎಂದು ತಿಳಿಸಿದೆ.

ಹೀಗಾಗಿ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಆದೇಶ ಹೊರಡಿಸಿದ್ದಾರೆ.ಈ ಹಿಂದೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ವಿರುದ್ದ ಬೃಹತ್ ಹೋರಾಟ ನಡೆದಿತ್ತು. ಆಟೋ ,ಟ್ಯಾಕ್ಸಿ, ಮ್ಯಾಕ್ಸಿ,ಕ್ಯಾಬ್ ಚಾಲಕರು ಬೈಕ್ ಟ್ಯಾಕ್ಸಿ ವಿರುದ್ದ ಸಿಡಿದೆದ್ದಿದ್ದರು. ಮಹಿಳೆಯರಿಗೆ ಅಸುರಕ್ಷಿತವಾದ ಯೋಜನೆ ಅಂತಾ ಹೇಳಲಾಗಿತ್ತು. ಸದ್ಯ ಈಗ ಕಾಂಗ್ರೆಸ್ ಸರ್ಕಾರ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ರದ್ದುಗೊಳಿಸಿ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವಿದ್ದಲ್ಲಿ ಶಿಸ್ತುಕ್ರಮ :ಈಶ್ವರ ಖಂಡ್ರೆ

Spread the loveಚಾಮರಾಜನಗರ: ಹೂಗ್ಯಂ ವಲಯದಲ್ಲಿ 5 ಹುಲಿಗಳ ಅಸಹಜ ಸಾವು ಪ್ರಕರಣದಲ್ಲಿ ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಲ್ಲಿ, ಶಿಸ್ತುಕ್ರಮ ಜರುಗಿಸಲಾಗುವುದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ