ಬೆಂಗಳೂರು, ಮಾ.8: ಲೋಕಸಭೆ ಚುನಾವಣೆಗೆ ಅಖಾಡಕ್ಕಿಳಿಯುವ ಬಿಜೆಪಿ (BJP) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಹೈಕಮಾಂಡ್, ಎರಡನೇ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ.
ಇನ್ನೊಂದೆಡೆ, ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸುತ್ತಿರುವ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಹಾಲಿ ಸಂಸದೆ ಸುಮಲತಾ (Sumalatha) ಅವರು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ.
ಈ ಎಲ್ಲದರ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಆರ್.ಅಶೋಕ (R.Ashoka), ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ವಾಗ್ದಾಳಿಯೂ ನಡೆಸಿದರು.
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ ಎಂದು ಹೇಳಿದ ಅಶೋಕ, ಮನಸ್ಸಿಗೆ ಬಂದಂತೆ ಐದು ಗ್ಯಾರಂಟಿ ಘೋಷಿಸಿ ಅದನ್ನು ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಿಲ್ಲ.
ಕಾಂಗ್ರೆಸ್ ಸರ್ಕಾರ ಬೇಜವಾಬ್ದಾರಿಯಿಂದ ಕೆಆರ್ಎಸ್ ನೀರನ್ನು ತಮಿಳುನಾಡಿಗೆ ಬಿಟ್ಟು ಕೊಟ್ಟಿದೆ. ಈ ಕಾರಣದಿಂದ ಇವತ್ತು ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಕಾಣಿಸಿದೆ ಎಂದು ಆರೋಪಿಸಿದರು.