Breaking News

ಮಹಿಳಾ ದಿನದಂದೇ ಸುಧಾ ಮೂರ್ತಿ ರಾಜ್ಯಸಭೆಗೆ

Spread the love

ನವದೆಹಲಿ, ಮಾ.8: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆಯಾಗಿರುವ ಡಾ.ಸುಧಾ ಮೂರ್ತಿ (Sudha Murty) ಅವರು ರಾಜ್ಯಸಭೆಗೆ (Rajya Sabha) ನಾಮನಿರ್ದೇಶ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಘೋಷಣೆ ಮಾಡಿದ್ದಾರೆ. ಅಲ್ಲದೆ, ಟ್ವೀಟ್ ಮೂಲಕ ಸುಧಾ ಮೂರ್ತಿ ಅವರನ್ನು ಅಭಿನಂದಿಸಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಭಾರತದ ರಾಷ್ಟ್ರಪತಿಯವರು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಸಂತೋಷ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ ಎಂದರು.

ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ, ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಮೋದಿ ಹಾರೈಸಿದರು.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡರೆ ನಿಜವಾದ ಗ್ರಾಮ ಸ್ವರಾಜ್ : ಚನ್ನರಾಜ ಹಟ್ಟಿಹೊಳಿ

Spread the love ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡರೆ ನಿಜವಾದ ಗ್ರಾಮ ಸ್ವರಾಜ್ : ಚನ್ನರಾಜ ಹಟ್ಟಿಹೊಳಿ ಖಾನಾಪುರ: ಗ್ರಾಮ ಪಂಚಾಯಿತಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ