ಬೆಂಗಳೂರು ಗ್ರಾಮಾಂತರ, ಮಾ.10: ರಾಷ್ಟ್ರೀಯ ಹೆದ್ದಾರಿಯಲ್ಲಿ ವೀಲಿಂಗ್ ಮಾಡುತ್ತಿದ್ದ ಆರು ಜನ ಪುಂಡರನ್ನು ಬಂಧಿಸಿದ ಘಟನೆ ಬೆಂಗಳೂರು ಗ್ರಾಮಾಂತರ(Bengaluru Rural) ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ.
ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 13ಬೈಕ್ಗಳನ್ನು ಜಪ್ತಿ ಮಾಡಲಾಗಿದೆ.
ಇವರು ಶಿವರಾತ್ರಿ ಸೇರಿದಂತೆ ಇತರೆ ಹಬ್ಬಗಳ ಸಂದರ್ಭಗಳಲ್ಲಿ ಅಪಾಯಕಾರಿ ವೀಲಿಂಗ್ ಮಾಡುವ ಮೂಲಕ ಇತರೆ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದರು.
ಈ ಹಿನ್ನಲೆ ಪ್ಲ್ಯಾನ್ ಮಾಡಿದ ಪೊಲೀಸರು, ಮೊದಲು ವೀಲಿಂಗ್ ದೃಶ್ಯವನ್ನ ಸರೆ ಹಿಡಿದು ಆರೋಪಿಗಳನ್ನು ಬಂಧಿಸಿದ್ದಾರೆ.