Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಲೋಕಸಭೆ ಚುನಾವಣೆಗೆ ನಾನು, ನನ್ನ ಪುತ್ರ ಸ್ಪರ್ಧಿಸಲ್ಲ: ಪ್ರಕಾಶ್ ಹುಕ್ಕೇರಿ

ಲೋಕಸಭೆ ಚುನಾವಣೆಗೆ ನಾನು, ನನ್ನ ಪುತ್ರ ಸ್ಪರ್ಧಿಸಲ್ಲ: ಪ್ರಕಾಶ್ ಹುಕ್ಕೇರಿ

Spread the love

ಚಿಕ್ಕೋಡಿ, ಮಾರ್ಚ್​ 11: ಲೋಕಸಭೆ ಚುನಾವಣೆ (Lok Sabha Election) ಕಲವೇ ತಿಂಗಳು ಬಾಕಿ ಉಳಿದಿವೆ. ಕಾಂಗ್ರೆಸ್​ (Congress) ಮತ್ತು ಬಿಜೆಪಿ (BJP) ಎರಡೂ ರಾಷ್ಟ್ರೀಯ ಪಕ್ಷದಲ್ಲಿ ಟಿಕೆಟ್​​ ವಿಚಾರವಾಗಿ ಸಾಕಷ್ಟು ಹಗ್ಗಜಗ್ಗಾಟ ನಡೆಯುತ್ತಿದೆ. ರಾಜ್ಯ ರಾಜಕೀಯ ಪವರ್​ ಸೆಂಟರ್​ ಆಗಿರುವ ಬೆಳಗಾವಿ ಮತ್ತು ಚಿಕ್ಕೋಡಿ (Chikkodi) ಎರಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ ಯಾರಿಗೆ ಸಿಗಲಿದೆ ಎಂಬುವುದು ಗೊಂದಲ ಗೂಡಾಗಿದೆ. ಈ ಮಧ್ಯೆ ಲೋಕಸಭೆ ಚುನಾವಣೆಗೆ ನಾನು, ನನ್ನ ಪುತ್ರ ಸ್ಪರ್ಧಿಸಲ್ಲ ಎಂದು ಪ್ರಕಾಶ್ ಹುಕ್ಕೇರಿ (Prakash Hukkeri) ಹೈಕಮಾಂಡ್‌ಗೆ ಸಂದೇಶ ರವಾನಿಸಿದ್ದಾರೆ.

ಚಿಕ್ಕೋಡಿ ಟಿಕೆಟ್ ಕುರುಬ ಸಮುದಾಯಕ್ಕೆ ನೀಡಿದರೇ ಗೆಲ್ಲಿಸಿಕೊಂಡು ಬರುತ್ತೇವೆ. 2014ರಲ್ಲಿ ಮಂತ್ರಿ ಆಗಿದ್ದರೂ ಮುಖ್ಯಮಂತ್ರಿಗಳ ಸೂಚನೆಯಂತೆ ಲೋಕಸಭೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದೆ. ಆಗ ಗಣೇಶ್ ಹುಕ್ಕೇರಿ ಅವರನ್ನು ಮಂತ್ರಿ ಮಾಡುತ್ತೇವೆ ಅಂತ ಭರವಸೆ ಕೊಟ್ಡಿದ್ದರು. ಆದರೆ ಈಗ ಪುತ್ರ ಗಣೇಶ್ ಶಾಸಕನಾಗಿ ಆಯ್ಕೆಯಾದರೂ ಮಂತ್ರಿ ಮಾಡಲಿಲ್ಲ. ನಾನಾಗಲಿ, ನನ್ನ ಮಗನಾಗಲಿ ಮಂತ್ರಿ ಸ್ಥಾನ ಕೇಳಿಲ್ಲ, ಕೇಳೋದು ಇಲ್ಲ ಎಂದು ಹೇಳಿದರು.

ಈಗ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಒತ್ತಡ ಬರುತ್ತಿದೆ. ನಾನು‌ ಸ್ಪರ್ಧಿಸಿದರೇ ಚಿಕ್ಕೋಡಿ ಕ್ಷೇತ್ರ ಗೆಲ್ಲುತ್ತೇವೆ ಅಂತ ಲೆಕ್ಕಾಚಾರವಿದೆ. ಆದರೆ ಯಾವುದೇ ಕಾರಣಕ್ಕೂ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲ್ಲ. ಚಿಕ್ಕೋಡಿ ಲೋಕಸಭೆಯಲ್ಲಿ 3 ಲಕ್ಷ ಕುರುಬ ಸಮುದಾಯದರು ಇದ್ದಾರೆ. ಕುರುಬ ಸಮುದಾಯದ ಲಕ್ಷ್ಮಣ ರಾವ್ ಚಿಂಗಳೆಗೆ ‘ಕೈ’ ಟಿಕೆಟ್ ಕೊಡಿ. ನಾವೆಲ್ಲರೂ ಸೇರಿ ಗೆಲ್ಲಿಸಿಕೊಂಡು ಬರುತ್ತೇವೆ ಎಂದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ