ಬೆಂಗಳೂರು, ಮಾರ್ಚ್.11: ರಾಜ್ಯಾದ್ಯಂತ ಮಾರಾಟ ಮಾಡುತ್ತಿರುವ ಕಾಟನ್ ಕ್ಯಾಂಡಿ (Cotton Candy) ಹಾಗೂ ಗೋಬಿ ಮಂಚೂರಿಯನ್ (Gobi Manchurian) ಮಾದರಿ ಗಳಲ್ಲಿ ಆರೋಗ್ಯಕ್ಕೆ ಮಾರಕವಾದ ಅಂಶ ಹಾಗೂ ಬಳಕೆಯ ಬಣ್ಣ ಸೇರಿದಂತೆ ವ್ಯಸನಕಾರಿ ರಾಸಾಯನಿಕ ಅಂಶಗಳು ಪತ್ತೆಯಾಗಿದ್ದು, ಈ ಅಸುರಕ್ಷಿತ ವಸ್ತುಗಳನ್ನು ಬಳಕೆ ಮಾಡದಂತೆ ಆರೋಗ್ಯ ಇಲಾಖೆಯು ನಿರ್ಬಂಧ ಹೇರಲು ಮುಂದಾಗಿದೆ.
ಈ ಬಗ್ಗೆ ಇಂದು (ಮಾ.11) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಮಹತ್ವದ ಸುದ್ದಿಗೋಷ್ಠಿಗೂ ಮುಂದಾಗಿದ್ದಾರೆ.ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದೆ.
ಇವುಗಳಲ್ಲಿ ಕೃತಕ ಬಣ್ಣಗಳ ಬಳಸಿರುವುದು ಪತ್ತೆಯಾಗಿದೆ. ಆ ಹಿನ್ನೆಲೆಯಲ್ಲಿ, ಇಂದು ಮಹತ್ವದ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ. ಮಂಚೂರಿ ಹಾಗೂ ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣ ಬೆರಕೆ ಹಿನ್ನೆಲೆ ಈ ಹಿಂದೆ ವಿವಿಧ ಸ್ಯಾಂಪಲ್ ಗಳ ಪರೀಕ್ಷೆಗೆ ನೀಡಲಾಗಿತ್ತು.
ಸದ್ಯ ಪರೀಕ್ಷೆಯ ವರದಿ ಬಂದ ಹಿನ್ನೆಲೆ ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ಧಿಗೋಷ್ಠಿ ನಡೆಸಲು ಮುಂದಾಗಿದ್ದು ರಾಜ್ಯದಲ್ಲಿ ಅಸುರಕ್ಷಿತ ಗೋಬಿ ಹಾಗೂ ಕ್ಯಾಂಡಿ ಕೂಡ ಬ್ಯಾನ್ ಆಗುವ ಸಾಧ್ಯತೆ ಇದೆ.