Breaking News

ಕೃಷಿ ಹೊಂಡದಲ್ಲಿ ಈಜಲು ಹೋಗಿತಂದೆ ಮಕ್ಕಳು ಸಾವು…!

Spread the love

ಚಿಕ್ಕೋಡಿ : ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ವ್ಯಕ್ತಿ ಹಾಗೂ ಆತನ ಇಬ್ಬರು ಮಕ್ಕಳು ನೀರಲ್ಲಿ ಮುಳುಗಿ ಸಾವಣಪ್ಪಿರುವ ಘಟನೆ ಭಾನುವಾರ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ನಡೆದಿದೆ.

ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ  ಕಲ್ಲಪ್ಪ ಗಾಣಿಗೇರ (36) ಮಕ್ಕಳಾದ  ಮನೋಜ ಕಲ್ಲಪ್ಪ ಗಾಣಿಗೇರ (11) ಹಾಗೂ ಮದನ ಕಲ್ಲಪ್ಪ ಗಾಣಿಗೇರ (9) ಮೃತ ದುರ್ದೈವಿಗಳು.

ವೃತ್ತಿಯಲ್ಲಿ‌ ಸರ್ಕಾರಿ ಶಿಕ್ಷಕರಾಗಿದ್ದ ಕಲ್ಲಪ್ಪ ಗಾಣಿಗೇರ ನಿಡಗುಂದಿ ಗ್ರಾಮದ ಹುಕ್ಕೇರಿ ತೋಟದ ಮಗದುಮ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಭಾನುವಾರ ಮಧ್ಯಾಹ್ನ  ತೋಟದಲ್ಲಿ ನಿರ್ಮಿಸಿದ ಕೃಷಿ ಹೊಂಡದಲ್ಲಿ ಈಜಲು ಹೋದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ಪೋಲಿಸರು ಬೇಟಿ ನೀಡಿ‌ ಪರಶೀಲನೆ ನಡೆಸಿದ್ದಾರೆ. ಈ ಕುರಿತು ರಾಯಬಾಗ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಧೈರ್ಯ ವಿದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕಾಂಗ್ರೆಸ್ ಮುಖಂಡ ರವಿ ಕರಾಳೆ ಹೇಳಿದರು.

Spread the loveಧೈರ್ಯ ವಿದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕಾಂಗ್ರೆಸ್ ಮುಖಂಡ ರವಿ ಕರಾಳೆ ಹೇಳಿದರು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ