ಹೆಚ್ಚಾಗಿ ತಮಿಳುನಾಡಿನಲ್ಲೇ ಪ್ರಚಲಿತವಿರುವ ಇಂಥಾದೊಂದು ಆಚರಣೆ ನಮ್ಮ ರಾಜ್ಯದ ಗಡಿಯಭಾಗವಾದ ಕೆಜಿಎಫ್ನಲ್ಲೂ ಹಲವಾರು ವರ್ಷಗಳಿಂದ ಆಚರಣೆಯಲ್ಲಿದೆ. ಈ ವಿಶೇಷವಾದ ದಿನದಂದು ಈ ನರಕಾಸುರ ಸಂಹಾರವನ್ನು ನೋಡಲು ದೂರದ ಊರುಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಬರ್ತಾರೆ. ತಮಿಳುನಾಡು, ಆಂಧ್ರ, ಬೆಂಗಳೂರುನಿಂದಲೂ ಜನ ಬರುತ್ತಾರೆ.
ಶಿವರಾತ್ರಿ ಅಂದ್ರೆ ಬಹುತೇಕರು ಕಟ್ಟುನಿಟ್ಟಾಗಿ ಉಪವಾಸವಿದ್ದು ಶಿವರಾತ್ರಿಯನ್ನು ಆಚರಣೆ ಮಾಡ್ತಾರೆ, ಅದೇ ರೀತಿ ಇಲ್ಲೊಂದಷ್ಟು ಜನ ಶಿವರಾತ್ರಿಯನ್ನು ಶಿವರಾತ್ರಿ ನಂತರ ಬರುವ ಅಮಾವಾಸ್ಯೆಯ ದಿನ ಸ್ಮಶಾನವಾಸಿಯಾದ ಶಿವನನ್ನು ವಿಭಿನ್ನವಾಗಿ ಪೂಜಿಸಿ, ಆರಾಧಿಸಿ, ಕಾಳಿ ಮಾತೆಯ ವೇಷಧಾರಿಯಾಗಿ ನರಕಾಸುರ ಸಂಹಾರವನ್ನು ಮಾಡಿ ಬಲಿಕೊಟ್ಟು ಪೂಜಿಸುತ್ತಾರೆ.
ಒಟ್ಟಾರೆ ದುಷ್ಟಶಕ್ತಿಗಳ ನಿವಾರಣೆಗೆ ಕರಾವಳಿ ಭಾಗರದಲ್ಲಿ ಭೂತಾರಾಧನೆ ಮಾಡಿದ್ರೆ, ಬಯಲು ಸೀಮೆ ಪ್ರದೇಶದಲ್ಲಿ ಕಾಳಿ ಆರಾಧಕರು ನರಕಾಸುರ ಸಂಹಾರ ಮಾಡೋ ಮೂಲಕ ಸಮಾಜದಲ್ಲಿ ಹಾಗೂ ಮನುಷ್ಯನಲ್ಲಿರುವ ದುಷ್ಟಶಕ್ತಿಗಳು ಸಂಹಾರವಾಗುತ್ತವೆ ಅನ್ನೋ ನಂಬಿಕೆ ಈಗಲು ಹಲವು ವರ್ಷಗಳಿಂದ ಜೀವಂತವಾಗಿರೋದಂತು ಸುಳ್ಳಲ್ಲ. ಕೆಲವರಿಗೆ ಇದು ಮೂಡನಂಭಿಕೆ ಅನಿಸಿದರೂ ಆಚರಣೆ ಸುಗಮವಾಗಿ ಮುಂದುವರಿದಿದೆ.