Breaking News

ಸಂವಿಧಾನ ಬದಲಾವಣೆ ಮಾಡಲು ಹೊರಟರೆ ದೇಶದಲ್ಲಿ ರಕ್ತಪಾತ: ಸಿಎಂ

Spread the love

ಬೆಂಗಳೂರು, ಮಾರ್ಚ್​ 11: ಬಿಜೆಪಿಯವರು ಒಂದು ವೇಳೆ ಸಂವಿಧಾನ ಬದಲಾವಣೆ ಮಾಡುವ ಕೆಲಸಕ್ಕೆ ಹೊರಟರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು.

ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರ ಸಂವಿಧಾನ ಬದಲಾವಣೆ ಹೇಳಿಕೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಹೆಗಡೆ ಈ ರೀತಿ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಸಚಿವರಾಗಿದ್ದಾಗಲೂ ಸಂವಿಧಾನ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದರು.

ನರೇಂದ್ರ ಮೋದಿ ಅವರು ಪ್ರಧಾನಿಯಾಗಿದ್ದಾಗಲೇ ಹೆಗಡೆ ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ್ದರು. ಆದರೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.ಸಂವಿಧಾನ ಬದಲಾವಣೆ ಮಾಡುವುದು ಬಿಜೆಪಿಯವರ ರಹಸ್ಯ ಅಜೆಂಡಾ. ಸಂವಿಧಾನಕ್ಕೆ ಅನಗತ್ಯ ತಿದ್ದುಪಡಿತರಲಾಗಿದೆ. ಅವುಗಳನ್ನು ಸರಿಪಡಿಸಬೇಕು.

ಅದಕ್ಕೆ ಮೂರನೇ ಎರಡರಷ್ಟು ಬಹುಮತ ಬೇಕು ಎಂದು ಹೆಗಡೆ ಹೇಳಿದ್ದಾರೆ. ಅವರು ಜನತೆಯಲ್ಲಿ ಮೂರನೇ ಎರಡರಷ್ಟು ಬಹುಮತ ಕೇಳಿರುವುದು ದೇಶದ ಉದ್ಧಾರಕ್ಕಲ್ಲ ಎಂದು ಸಿದ್ದರಾಮಯ್ಯ ಹೇಳಿದರು.


Spread the love

About Laxminews 24x7

Check Also

ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವಿದ್ದಲ್ಲಿ ಶಿಸ್ತುಕ್ರಮ :ಈಶ್ವರ ಖಂಡ್ರೆ

Spread the loveಚಾಮರಾಜನಗರ: ಹೂಗ್ಯಂ ವಲಯದಲ್ಲಿ 5 ಹುಲಿಗಳ ಅಸಹಜ ಸಾವು ಪ್ರಕರಣದಲ್ಲಿ ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಲ್ಲಿ, ಶಿಸ್ತುಕ್ರಮ ಜರುಗಿಸಲಾಗುವುದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ