Breaking News

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಬಾಂಬರ್ ಯಾರೆಂಬುದು ಗೊತ್ತಾಗಿದೆ: ಗೃಹಸಚಿವ ಪರಮೇಶ್ವರ್

Spread the love

ಬೆಂಗಳೂರು, ಮಾರ್ಚ್​ 11: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ (Rameswaram cafe) ಸಂಭವಿಸಿದ್ದ ಸ್ಪೋಟ (Bomb Blast) ಪ್ರಕರಣಕ್ಕೆ ಸಂಬಂಧಿಸಿದ ಬಾಂಬರ್​ ಯಾರೆಂಬುದು ಒಂದು ಹಂತಕ್ಕೆ ಪತ್ತೆ ಆಗಿದೆ. ಅದನ್ನು ದೃಢಪಡಿಸಿಕೊಳ್ಳಬೇಕಿ ಎಂದು ಗೃಹಸಚಿವ ಜಿ ಪರಮೇಶ್ವರ್​ (G Parameshwara) ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಾಂಬರ್ ಯಾರೆಂಬುದು ಬಹುತೇಕ ಪತ್ತೆಯಾಗಿದೆ. ಅದನ್ನು ಸಿಸಿಬಿ, ಎನ್​ಐಎ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ತಿಳಿಸಿದರು. ಮಾರ್ಚ್ 1ರಂದು ಸಂಭವಿಸಿದ್ದ ಬಾಂಬ್ ಸ್ಫೋಟದಲ್ಲಿ ಐದು ಮಂದಿ ಗಾಯಗೊಂಡಿದ್ದರು.

ಏತನ್ಮಧ್ಯೆ, ಸಂವಿಧಾನ ಬದಲಾವಣೆ ಕುರಿತು ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವರು, ಪ್ರಧಾನಿಯವರು ಅಂಬೇಡ್ಕರ್ ಸಂವಿಧಾನ ಕೊಟ್ಟಿದ್ದನ್ನು ಶ್ಲಾಘಿಸಿದ್ದಾರೆ. ಸಂವಿಧಾನ ‌ಇಲ್ಲದಿದ್ರೆ ನಾನು ಪ್ರಧಾನಿಯೇ ಆಗುತ್ತಿರಲಿಲ್ಲ ಎಂದಿದ್ದಾರೆ. ಆದರೆ, ಅವರ ಪಕ್ಷದ ಸಂಸದ ಸಂವಿಧಾನ ಬದಲು ಮಾಡುತ್ತೇವೆ ಎನ್ನುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಹಲವು ಬಾರಿ ಸಂಸದ ಅನಂತಕುಮಾರ್ ಹೆಗಡೆ ಹೀಗೆ ಹೇಳಿದ್ದಾರೆ. ಕೇವಲ ಸಂಸದ​ ಹಗಡೆ ಹೇಳಿಕೆಯಿಂದ ದೂರ ಇದ್ದೇವೆ ಎಂದರೆ ಸಾಲದು. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಸಂವಿಧಾನವನ್ನೇ ‌ಬದಲಿಸುತ್ತೇವೆ ಎಂಬುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ