Breaking News

ಚುನಾವಣೆ ಬಿಸಿ ಏರತೊಡಗಿದ್ದು ದಿನ ಕಳೆದಂತೆ ವಿಭಿನ್ನ ಲೆಕ್ಕಾಚಾರ

Spread the love

ಬೆಳಗಾವಿ : ಲೋಕಸಭಾ ಚುನಾವಣೆ ಬಿಸಿ ಏರತೊಡಗಿದ್ದು ದಿನ ಕಳೆದಂತೆ ವಿಭಿನ್ನ ಲೆಕ್ಕಾಚಾರ ಹೊರಬರುತ್ತಿವೆ. ಈ ನಡುವೆ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಬಿಜೆಪಿ ಟಿಕೆಟ್ ಯಾರಿಗೆ ಎಂಬ ಚರ್ಚೆ ಜೋರಾಗಿದೆ.

ಸಧ್ಯ ಮೂಲಗಳ ಪ್ರಕಾರ ಬೆಳಗಾವಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅದವರನ್ನೇ ಕಣಕ್ಕೆ ಇಳಿಸಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾಂಗ್ರೆಸ್ ಸೇರಿ ಬಿಜೆಪಿಗೆ ಹೊಡೆತ ನೀಡಿದ್ದ ಶೆಟ್ಟರ್ ಅವರಿಗೆ ಬೆಳಗಾವಿ ಟಿಕೆಟ್ ನೀಡುವ ಕುರಿತು ಮಾತುಕತೆ ಮಾಡಲಾಗಿದೆ ಎನ್ನಲಾಗುತ್ತಿದೆ‌.

 

Annasaheb Shankar Jolle Vs Ramesh Katti ! | Chikodi | BJP | Lok Sabha Election 2024 | Karnataka TV - YouTube

ಹಾಲಿ ಸಂಸದೆ ಮಂಗಳಾ ಅಂಗಡಿ ಬದಲಿಗೆ ಈ ಬಾರಿ ಅನೇಕರು ಟಿಕೆಟ್ ಗಾಗಿ ಪೈಪೋಟಿ ನಡೆಸಿದ್ದರು. ಇದರಲ್ಲಿ ಮುಖ್ಯವಾಗಿ ಈರಣ್ಣ ಕಡಾಡಿ ಹಾಗೂ ಮಹಾಂತೇಶ್ ಕವಠಗಿಮಠ ಹೆಸರು ಮುಂಚೂಣಿಯಲ್ಲಿತ್ತು. ಆದರೆ ಬಿಜೆಪಿ ಹೈಕಮಾಂಡ್ ಜಗದೀಶ್ ಶೆಟ್ಟರ್ ಅವರಿಗೆ ಅವಕಾಶ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರಿಗೆ ಟಿಕೆಟ್ ಕೈ ತಪ್ಪುವ ಭೀತಿ ಇದೆ. ಮಾಜಿ ಸಂಸದ ಹಾಗೂ ದಿ. ಉಮೇಶ್ ಕತ್ತಿ ಸಹೋದರ ರಮೇಶ್ ಕತ್ತಿ ಅವರಿಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆ ದಟ್ಟವಾಗಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ