Breaking News

ಅಪಾಯಕಾರಿ ಕಾಟನ್ ಕ್ಯಾಂಡಿ,ಗೋಬಿ ಮಂಚೂರಿಯನ್ನು ಮಾರಾಟ ಮಾಡುವಂತಿಲ್ಲ: ದಿನೇಶ್ ಗುಂಡೂರಾವ್

Spread the love

ಬೆಂಗಳೂರು : ಅಪಾಯಕಾರಿ ಕಾಟನ್ ಕ್ಯಾಂಡಿ,ಗೋಬಿ ಮಂಚೂರಿಯನ್ನು ಮಾರಾಟ ಮಾಡುವಂತಿಲ್ಲ ಎಂದು ಆರೋಗ್ಯ ಸಚಿವ‌ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವಿಧಾನಸೌಧ ದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವರು,ಗೋಬಿ ಮಂಚೂರಿ, ಕಾಟನ್ ಕ್ಯಾಂಡಿಯಲ್ಲಿ ಅಪಾಯಕಾರಿ ಕೃತಕ ಬಣ್ಣ ಬಳಕೆ ಹೆಚ್ಚಾಗಿರುವುದು ಆಹಾರ ತಪಾಸಣೆಯಲ್ಲಿ ಕಂಡು ಬಂದಿದೆ ಎಂದು ಹೇಳಿದರು.

Breaking : ರಾಜ್ಯದಲ್ಲಿ ಇನ್ಮುಂದೆ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ಬ್ಯಾನ್ ; ಕಾನೂನು ಉಲ್ಲಂಘಿಸಿದರೆ 10 ಲಕ್ಷ ದಂಡ

ಒಂದು ವೇಳೆ ಯಾರಾದರೂ ಇವುಗಳನ್ನು ಮಾರಾಟ ಮಾಡಿದರೆ ಅಥವಾ ಅಪಾಯಕಾರಿ ಕೃತಕ ಬಣ್ಣ ಬಳಕೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ಸರ್ವೆಯಲ್ಲಿ ಸ್ಯಾಂಪಲ್‌ ಪರೀಕ್ಷೆ ಮಾಡಲಾಗಿತ್ತು. ಈ ಸರ್ವೆಯಲ್ಲಿ ಹತ್ತಾರು ಮಾದರಿ ಕಾಟನ್ ಕ್ಯಾಂಡಿ ಅಸುರಕ್ಷಿತವಾಗಿರುವುದು ಕಂಡು ಬಂದಿದೆ. ನೂರಕ್ಕೂ ಹೆಚ್ಚು ಮಾದರಿಯ ಗೋಬಿ ಹಾನಿಕಾರಕವಾಗಿದೆ. ಇದನ್ನು ಬಳಕೆ ಮಾಡುವಂತಿಲ್ಲ,ಇದಕ್ಕೆ ಅನುಮತಿಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ