ಬೆಂಗಳೂರು, ಮಾರ್ಚ್ 12: ಲೋಕಸಭಾ ಚುನಾವಣೆಗೆ ಮೈತ್ರಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರು 28 ಲೋಕಸಭಾ ಕೇತ್ರಗಳನ್ನ ಗೆಲ್ಲುವ ಮೂಲಕ ಆಡಳಿತರೂಢ ಕಾಂಗ್ರೆಸ್ ಠಕ್ಕರ್ ಕೊಡಲು ಮುಂದಾಗಿದೆ. 28 ಲೋಕಸಭಾ ಕ್ಷೇತ್ರಗಳ ಫೈಕಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಸಂಸದರಿದ್ದಾರೆ.
ಆದರೆ, ಈ ಬಾರಿ ಈ ಕ್ಷೇತ್ರವನ್ನ ಗೆಲ್ಲಲು ದಳಪತಿಗಳು ಮಾಸ್ಟರ್ ಪ್ಲಾನ್ ಮಾಡಿದ್ದಾರೆ.ಹೌದು, ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮನವೊಲಿಸುವಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಮಂಜುನಾಥ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ನ ಡಿಕೆ ಸುರೇಶ್ ವಿರುದ್ಧ ಕಣಕ್ಕಿಳಿಸಲು ಮೈತ್ರಿ ನಾಯಕರು ಮುಂದಾಗಿದೆ. ಈಗಾಗಲೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳ ಮೈತ್ರಿ ಶಾಸಕರೊಂದಿಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸಭೆ ನಡೆಸಿ ಅಂತಿಮವಾಗಿ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒಟ್ಟಾಗಿ ಕೆಲಸ ಮಾಡುವಂತೆ ಸ್ಥಳೀಯ ಮುಖಂಡರ ಜೊತೆಗೆ ಚರ್ಚೆ ನಡೆಸಿ, ಅಂತಿಮವಾಗಿ ಡಿಕೆ ಬ್ರದರ್ಸ್ ಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಡಾ.ಮಂಜುನಾಥ್ ಅವರನ್ನ ಕಣಕ್ಕಿ ಸಿದ್ದತೆ ನಡೆಸಿದ್ದಾರೆ.ಇತ್ತ ರಾಜ್ಯ ನಾಯಕರ ಜೊತೆಗೆ ಸಭೆ ನಡೆಸಿದ್ದು, ಬಳಿಕ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ದೆಹಲಿಯಲ್ಲಿ ಅಂತಿಮ ಮಾತುಕತೆ ನಡೆಸಲಿದ್ದಾರೆ. ಸ್ಪರ್ಧೆಗೆ ಮಂಜುನಾಥ್ ಒಪ್ಪಿಗೆ ನೀಡಿರುವ ಬಗ್ಗೆ ಕುಮಾರಸ್ವಾಮಿ ಬಿಜೆಪಿ ನಾಯಕರ ಗಮನಕ್ಕೆ ತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಂಗಳವಾರ ಮೋದಿ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ ಡಾ. ಮಂಜುನಾಥ್ ಅವರನ್ನ ಕಣಕ್ಕಿಳಿಸುವ ಚರ್ಚೆ ನಡೆದಿದೆ ಎನ್ನಲಾಗಿದೆ.ಸಭೆಯಲ್ಲಿ ಮಾಜಿ ಸಚಿವರಾದ ಸಿಪಿ ಯೋಗೆಶ್ವರ್, ಮುನಿರತ್ನ, ಶಾಸಕ ಎಂ ಕೃಷ್ಣಪ್ಪ, ನಿಖಿಲ್ ಕುಮಾರಸ್ವಾಮಿ ಸೇರಿ ಉಭಯ ಪಕ್ಷಗಳ ನಾಯಕರು ಭಾಗಿಯಾಗಿ ಮಂಜುನಾಥ್ ಸ್ಪರ್ಧೆ ಪರ ಒಲವು ವ್ಯಕ್ತಪಡಿಸಿದ್ದರು.