Breaking News

ದೇಶದಲ್ಲಿ ಸಂವಿಧಾನ ಬದಲಿಸಿದ್ರೆ ರಕ್ತಪಾತವಾಗುತ್ತೆ : ಸಿಎಂ

Spread the love

ಬೆಂಗಳೂರು : ಜೆಪಿಯವರು ಸಂವಿಧಾನ ಬದಲಾವಣೆ ಮಾಡುವ ಒಳಸಂಚು ರೂಪಿಸಿದ್ದಾರೆ. ಆದರೆ ದೇಶದಲ್ಲಿ ಸಂವಿಧಾನ ಬದಲಿಸಿದ್ರೆ ರಕ್ತಪಾತವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡುವ ಒಳಸಂಚು ರೂಪಿಸಿದ್ದಾರೆ.ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗಿಂತ ಸಂವಿಧಾನ ಬದಲಿಸಲು ಬಹುಮತ ಬೇಕಾಗಿದೆ. ಒಂದೇ ವೇಳೆ ಸಂವಿಧಾನ ಬದಲಾವಣೆ ಮಾಡಿದ್ರೆ ದೇಶದಲ್ಲಿ ರಕ್ತಪಾತವಾಗುತ್ತದೆ ಎಂದು ಹೇಳಿದ್ದಾರೆ.

 

ಬಿಜೆಪಿಯ ಹಾಲಿ ಸಂಸದ, ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರು ಪದೇ ಪದೇ ಸಂವಿಧಾನ ಬದಲಾಯಿಸುವ ಮಾತಾಡುತ್ತಿದ್ದಾರೆ. ಇವರು ಬಹಿರಂಗವಾಗಿ ಸಂವಿಧಾನ ಬದಲಾಯಿಸುವ ಮಾತಾಡಿದರೂ ಪ್ರಧಾನಿ ನರೇಂದ್ರ ಮೋದಿ ಅವರಾಗಲೀ, ಬಿಜೆಪಿ ಹೈ ಕಮಾಂಡ್ ಆಗಲಿ ಇದನ್ನು ವಿರೋಧಿಸಿಲ್ಲ. ಹೀಗಾಗಿ ಬಿಜೆಪಿ ಪಕ್ಷದ ಅಜೆಂಡಾವನ್ನು ನಾಡಿನ ಜನತೆ ಅರ್ಥಮಾಡಿಕೊಳ್ಳಬೇಕು.

ನಮ್ಮ ಸಂವಿಧಾನ ಹೋದರೆ ನಾಡಿನ ಜನರ, ಮಕ್ಕಳ ಭವಿಷ್ಯಕ್ಕೆ, ಅವರ ಬದುಕುವ-ದುಡಿಯುವ ಅವಕಾಶಗಳಿಗೆ ಕಂಟಕ ಬರುತ್ತದೆ ಎಂದು ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ಆರೋಪಿಗಳನ್ನು ಕರೆತರುವಾಗ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಪಿಎಸ್ಐ ಸಾವು

Spread the loveಬೆಂಗಳೂರು: ಪ್ರಕರಣವೊಂದರ ಆರೋಪಿಗಳನ್ನು ಬಂಧಿಸಿ ಕರೆತರುವಾಗ‌ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಪಿಎಸ್ಐ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತಲಘಟ್ಟಪುರ ಠಾಣೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ