Breaking News

ಕೆಎಎಸ್ ಅಧಿಕಾರಿ ಸುಧಾ ಅವರ ಮತ್ತಷ್ಟು ಅಕ್ರಮ ಆಸ್ತಿ ಪತ್ತೆ

Spread the love

ಬೆಂಗಳೂರು,ನ.14- ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಆಡಳಿತಾಧಿಕಾರಿ ಡಾ.ಜಿ.ಸುಧಾ ಅವರ ಅಕ್ರಮ ಆಸ್ತಿ ಮತ್ತಷ್ಟು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ದಾಳಿ ವೇಳೆ ದೊರೆತಿರುವ ಚಿನ್ನ, ಹಣ ಹಾಗೂ ಆಸ್ತಿ ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ಪಟ್ಟಿ ಮಾಡಿ ಅವುಗಳನ್ನು ಪರಿಶೀಲಿಸುತ್ತಿದ್ದಾರೆ.

ನ.7ರಂದು ಕೆಎಎಸ್ ಅಧಿಕಾರಿ ಸುಧಾ ಅವರ ಮನೆ ಹಾಗೂ ಪರಿಚಯಸ್ಥರ ಮನೆಗಳು ಸೇರಿದಂತೆ ಏಳು ಕಡೆ ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದರು.

ದಾಳಿ ಸಂದರ್ಭದಲ್ಲಿ ಆಸ್ತಿಗೆ ಸಂಬಂಧಪಟ್ಟ ಸುಮಾರು 200ಕ್ಕೂ ಹೆಚ್ಚು ದಾಖಲಾತಿಗಳು, ಕ್ರಯಪತ್ರಗಳು, ಜಿಪಿಎ ಪತ್ರಗಳು, ಕೆಲವು ಒಪ್ಪಂದದ ಕರಾರು ಪತ್ರಗಳು, ವಿವಿಧ ಬ್ಯಾಂಕ್‍ಗಳಲ್ಲಿನ ಸುಮಾರು 50 ಬ್ಯಾಂಕ್ ಖಾತೆಗಳ ವಿವರಗಳು, 50ಕ್ಕೂ ಹೆಚ್ಚು ಚೆಕ್‍ಲೀಫ್‍ಗಳು, 36.89 ಲಕ್ಷ ರೂ. ಹಣ
ದೊರೆತಿದೆ.

ಸುಧಾ ಮತ್ತು ಅವರಿಗೆ ಸಂಬಂಧಪಟ್ಟ ಇತರ ವ್ಯಕ್ತಿಗಳ ಬ್ಯಾಂಕ್ ಖಾತೆಗಳಲ್ಲಿ ಸುಮಾರು 3.5 ಕೋಟಿ ರೂ. ಠೇವಣಿಗಳು ಪತ್ತೆಯಾಗಿವೆ. ಅಲ್ಲದೆ 3.5 ಕೆಜಿ ಚಿನ್ನಾಭರಣಗಳು ಮತ್ತು 10.5 ಕೆಜಿ ಬೆಳ್ಳಿ ವಸ್ತುಗಳು ಪತ್ತೆಯಾಗಿರುತ್ತವೆ.


Spread the love

About Laxminews 24x7

Check Also

ಕಲಾ ಪ್ರತಿಭೋತ್ಸವಕ್ಕೆ ಚಾಲನೆ

Spread the love ಕಲಾ ಪ್ರತಿಭೋತ್ಸವಕ್ಕೆ ಚಾಲನೆ ಬೆಳಗಾವಿ. ಜಿಲ್ಲೆಯ ಬಾಲ ಪ್ರತಿಭೆ ಹಾಗೂ ಯುವ ಪ್ರತಿಭೆಗಳಿಗೆ ಜಾನಪದ ಗೀತೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ