ಬೆಂಗಳೂರು : ಬರದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಅಂತರ್ಜಲ ಹೆಚ್ಚಳಕ್ಕೆ ಮಹತ್ವದ ಕ್ರಮ ಕೈಗೊಂಡಿದೆ.
ಭಾರತೀಯ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ತುರ್ತು ಹಾಗೂ ದೀರ್ಘಕಾಲದ ಕ್ರಮಗಳನ್ನು ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.
ಬೆಳ್ಳಂದೂರು, ವರ್ತೂರು ಕೆರೆಗಳು ಬರಿದಾಗಿರುವುದರಿಂದ ಆ ಪ್ರದೇಶಗಳಲ್ಲಿ ಅಂತರ್ಜಲ ಕಡಿಮೆಯಾಗಿದೆ. 1,300 ಎಂಎಲ್ಡಿ ಸಂಸ್ಕರಿಸಿದ ಗುಣಮಟ್ಟದ ನೀರನ್ನು ಕೆರೆಗಳಿಗೆ ತುಂಬಿಸಲು ಉದ್ದೇಶಿಸಲಾಗಿದೆ ಜಲಮಂಡಳಿ ಅಧ್ಯಕ್ಷ ಡಾ. ರಾಮ್ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಪ್ರಾರಂಭದಲ್ಲಿ ನಾಯಂಡಹಳ್ಳಿ ಕೆರೆ, ಚಿಕ್ಕಬಾಣವಾರ ಕೆರೆ, ವರ್ತೂರು ಕೆರೆ, ಅಗರ ಕೆರೆ ಸೇರಿದಂತೆ ಆರು ಕೆರೆಗಳನ್ನು ತುಂಬಿಸಲಾಗುವುದು. ಅಲ್ಲದೇ, ಕೆರೆಗಳ ಪಕ್ಕದಲ್ಲಿಯೇ ಫಿಲ್ಟರ್ ಬೋರ್ವೆಲ್ಗಳನ್ನು ಕೊರೆದು, ಸಂಸ್ಕರಣೆ ಘಟಕ ಅಳವಡಿಸಿ, ಸುಮಾರು 10 ರಿಂದ 20 ಎಂಎಲ್ಡಿ ಕುಡಿಯುವ ನೀರನ್ನು ಒದಗಿಸುವ ಯೋಜನೆ ಇದೆ ಎಂದು ಹೇಳಿದ್ದಾರೆ.