Breaking News

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಕಿಚ್ಚ ಸುದೀಪ್ ಪ್ರಚಾರ

Spread the love

ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯುತ್ತಿರುವ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಗೆ ಕಿಚ್ಚ ಸುದೀಪ್ ಬೆಂಬಲ ನೀಡಲಿದ್ದಾರೆ.

ಮಾಜಿ ಸಿಎಂ ದಿವಂಗತ ಬಂಗಾರಪ್ಪನವರ ಮಗಳೂ ಆಗಿರುವ ಗೀತಾ ಶಿವರಾಜ್ ಕುಮಾರ್ ಗೆ ಶಿವಮೊಗ್ಗ ಕ್ಷೇತ್ರದಿಂದ ಈ ಬಾರಿ ಕಾಂಗ್ರೆಸ್ ಟಿಕೆಟ್ ನೀಡಿದೆ.ಇನ್ನೇನು ಅವರು ಶಿವಮೊಗ್ಗದಲ್ಲಿ ಪ್ರಚಾರ ಕಾರ್ಯವನ್ನೂ ಶುರು ಮಾಡಲಿದ್ದಾರೆ. ಅವರಿಗೆ ಪತಿ ಶಿವರಾಜ್ ಕುಮಾರ್ ಕೂಡಾ ಸಾಥ್ ನೀಡಲಿದ್ದಾರೆ.

ಆದರೆ ಅಷ್ಟು ಮಾತ್ರವಲ್ಲ, ಗೀತಾ ಶಿವರಾಜ್ ಕುಮಾರ್ ಪರ ಈಗ ಕಿಚ್ಚ ಸುದೀಪ್ ಕೂಡಾ ಪ್ರಚಾರ ನಡೆಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈಗಾಗಲೇ ಕಿಚ್ಚ ಸುದೀಪ್ ಬೆಂಬಲವನ್ನೂ ಕೋರಲಾಗಿದ್ದು ಅದಕ್ಕೆ ಸುದೀಪ್ ಕೂಡಾ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಎಲ್ಲರಿಗೂ ಗೊತ್ತಿರುವ ಹಾಗೆ ಸುದೀಪ್ ಕೂಡಾ ಶಿವಮೊಗ್ಗದವರು. ಜೊತೆಗೆ ಗೀತಾ ಶಿವರಾಜ್ ಕುಮಾರ್ ಅವರನ್ನು ತಮ್ಮ ಸ್ವಂತ ಅಕ್ಕನಂತೆ ಗೌರವಿಸುತ್ತಾರೆ.

ಹೀಗಾಗಿ ಸುದೀಪ್ ರನ್ನು ಪ್ರಚಾರಕ್ಕೆ ಕರೆತರಲು ಸಿದ್ಧತೆ ನಡೆಸಿದ್ದಾರೆ. ಕೇವಲ ಸುದೀಪ್ ಮಾತ್ರವಲ್ಲ, ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಗೆ ಆಪ್ತರಾಗಿರುವ ಅನೇಕ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳೂ ಪ್ರಚಾರಕ್ಕೆ ಬರಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ