ಚಿತ್ರದುರ್ಗ: ‘ರಾಜ್ಯದಲ್ಲಿ ಬಿಜೆಪಿ ಕಟ್ಟುವ ಪ್ರಯತ್ನದಲ್ಲಿ ನನ್ನ ಬೆವರ ಹನಿಯೂ ಇದೆ. ಪಕ್ಷಾಂತರ, ಓಲೈಕೆ ಹಾಗೂ ಹೊಂದಾಣಿಕೆ ರಾಜಕಾರಣವನ್ನು ಎಂದಿಗೂ ಮಾಡುವುದಿಲ್ಲ’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.
ಟಿಕೆಟ್ ಕೈತಪ್ಪಿದ ಬಿಜೆಪಿ ಸಂಸದರನ್ನು ಕಾಂಗ್ರೆಸ್ ಆಹ್ವಾನಿಸುತ್ತಿದೆ’ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಅಸಮಾಧಾನಗೊಂಡು ಹೀಗೆ ಪ್ರತಿಕ್ರಿಯಿಸಿದರು.
‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳಗೊಂಡ ಸಂಸದೀಯ ಮಂಡಳಿ ಸಮಿತಿಯು ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ನಿರ್ಧರಿಸುತ್ತದೆ. ದೇಶದ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಶೀಘ್ರ ಹೊರಬೀಳಲಿದೆ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ನಾನು ಕೂಡ ಕುತೂಹಲದಿಂದ ಪಟ್ಟಿಯನ್ನು ಎದುರು ನೋಡುತ್ತಿದ್ದೇನೆ’ ಎಂದರು.
Laxmi News 24×7