ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದೆ. ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ಗೆ ಹಾವೇರಿ ಟಿಕೆಟ್ ಕೈತಪ್ಪಿದೆ. ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ಗೆ ಹಾವೇರಿ ಟಿಕೆಟ್ ಕೊಡಿಸುವ ಭರವಸೆಯಲ್ಲಿದ್ದರು.
ಆದರೆ ಹಾಲಿ ಶಾಸಕರಾಗಿರುವ ಬಸವರಾಜ್ ಬೊಮ್ಮಾಯಿಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.
ಬೆಂಗಳೂರು, ಮಾರ್ಚ್ 13: ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದೆ. ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ಗೆ ಹಾವೇರಿ ಟಿಕೆಟ್ ಕೈತಪ್ಪಿದೆ. ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ಗೆ ಹಾವೇರಿ ಟಿಕೆಟ್ ಕೊಡಿಸುವ ಭರವಸೆಯಲ್ಲಿದ್ದರು.
ಆದರೆ ಹಾಲಿ ಶಾಸಕರಾಗಿರುವ ಬಸವರಾಜ್ ಬೊಮ್ಮಾಯಿ (Basavaraj Bommai) ಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಸದ್ಯ ಈ ವಿಚಾರವಾಗಿ ಮಾತನಾಡಿರುವ ಬಸವರಾಜ ಬೊಮ್ಮಾಯಿ, ಈಶ್ವರಪ್ಪ ಅವರು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಅವರಿಗೆ ನನ್ನ ಮೇಲೆ ಬೇಸರ ಇಲ್ಲ ಅಂತ ಭಾವಿಸಿದ್ದೇನೆ ಎಂದಿದ್ದಾರೆ