ಕಲಬುರಗಿ: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ.ಬಿಜೆಪಿ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸುತ್ತಿದೆ. ಏಕೆಂದರೆ, ಅವರ ಸಂಸದರು ಯಾವುದೇ ಕೆಲಸ ಮಾಡಿಲ್ಲ ಎಂದರು.
ಬೆಂಗಳೂರಿನ ನೀರಿನ ಸಮಸ್ಯೆ ಕುರಿತು ಮಾತನಾಡಿದ ಅವರು, ‘ನಮ್ಮ ಸರ್ಕಾರ ಕುಡಿಯುವ ನೀರು ಒದಗಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. 7,000ಕ್ಕೂ ಹೆಚ್ಚು ಕೊಳವೆ ಬಾವಿಗಳು ಬತ್ತಿ ಹೋಗಿವೆ. ನೀರಿನ ಕೊರತೆ ಉಂಟಾಗಿದೆ. ನಾವು ಈ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಂಡಿದ್ದೇವೆ ಮತ್ತು ನಾವು ಅದರ ಮೇಲೆ ಕೆಲಸ ಮಾಡುತ್ತಿದ್ದೇವೆ’ ಎಂದು ಹೇಳಿದರು.