ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ್ದು, ಅದರಲ್ಲಿ ಇಬ್ಬರು ಹಾಲಿ ಶಾಸಕರೂ ಇದ್ದಾರೆ. ಅವರು ಗೆದ್ದರೆ ಆ ಕ್ಷೇತ್ರಗಳ ಮತದಾರರು ಮತ್ತೊಂದುಚುನಾವಣೆಗೆ ಸಜ್ಜಾಗಬೇಕಾಗುತ್ತದೆ!
ಬುಧವಾರ ಬಿಜೆಪಿ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಾಲಿ ಶಾಸಕ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರ ಹೆಸರೂ ಇದೆ.ಅವರು ಕ್ರಮವಾಗಿ ಹಾವೇರಿ ಮತ್ತು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಗಳಿಂದ ಕಣಕ್ಕಿಳಿಯಲಿದ್ದಾರೆ.
ಬಸವರಾಜ ಬೊಮ್ಮಾಯಿ ಗೆದ್ದರೆ ಅವರು ಪ್ರತಿನಿಧಿಸುವ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಮೇಲ್ಮನೆಗೆ ಆಯ್ಕೆಯಾಗಿದ್ದಾರೆ. ಅವರು ಗೆದ್ದರೆ ಹಾಲಿ ಪ್ರತಿನಿಧಿಸುತ್ತಿರುವ ಕ್ಷೇತ್ರದಿಂದ ಮೇಲ್ಮನೆಗೆ ಚುನಾವಣೆ ನಡೆಯಲಿದೆ.