Breaking News

ಹಾವೇರಿ, ಧಾರವಾಡ ಟಿಕೆಟ್ ವಂಚಿತ ಜಗದೀಶ್ ಶೆಟ್ಟರ್​ಗೆ ಮತ್ತೊಂದು ಆಫರ್ ನೀಡಿದ ಅಮಿತ್ ಶಾ!

Spread the love

ಬೆಳಗಾವಿ, ಮಾರ್ಚ್​ 14: ಹಾವೇರಿ ಮತ್ತು ಧಾರವಾಡ ಕ್ಷೇತ್ರಗಳಲ್ಲಿ ಬಿಜೆಪಿ (BJP) ಟಿಕೆಟ್ ದೊರೆಯದೆ ಅಸಮಾಧಾನಗೊಂಡಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ (Jagadish Shettar) ಅವರ ಮನವೊಲಿಕೆಗೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅಖಾಡಕ್ಕೆ ಇಳಿದಿದ್ದಾರೆ. ಶೆಟ್ಟರ್​ಗೆ ದೂರವಾಣಿ ಕರೆ ಮಾಡಿ ಮಾತನಾಡಿರುವ ಅಮಿತ್ ಶಾ, ಬೆಳಗಾವಿಯಿಂದ ಸ್ಪರ್ಧೆ ಮಾಡುವಂತೆ ಸೂಚನೆ ನೀಡಿದ್ದಾರೆ. ಸದ್ಯ ಬಿಜೆಪಿ 20 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮುಂದಿನ ಹಂತದ ಅಭ್ಯರ್ಥಿ ಆಯ್ಕೆ ವೇಳೆ ಶೆಟ್ಟರ್​​​ರನ್ನು ಬೆಳಗಾವಿಯಿಂದ ಅಭ್ಯರ್ಥಿಯನ್ನಾಗಿ ಪರಿಗಣಿಸುವ ಸುಳಿವು ನೀಡಿದೆ.

ಅಮಿತ್ ಶಾ ಜೊತೆ ಮಾತನಾಡಿರುವ ಶೆಟ್ಟರ್ ಬೆಳಗಾವಿಯಿಂದ ಸ್ಪರ್ಧೆ ಮಾಡುವ ಬಗ್ಗೆ ಯೋಚಿಸಲು ಕಾಲಾವ ಕೇಳಿದ್ದಾರೆ. ಬೆಳಗಾವಿಯಿಂದ ಸ್ಪರ್ಧಿಸಿದರೆ ಸೋಲುವ ಬಗ್ಗೆ ಶೆಟ್ಟರ್​​ಗೆ ಭೀತಿ ಇದೆ ಎನ್ನಲಾಗಿದೆ. ಹೀಗಾಗಿ ಅವರು ಕಾಲಾವಕಾಶ ಕೇಳಿರುವ ಸಾಧ್ಯತೆ ಇದೆ. ಆದರೆ ಖುದ್ದು ಅಮಿತ್ ಶಾ ಸೂಚನೆ ನೀಡಿರುವುದರಿಂದ ಶೆಟ್ಟರ್ ಪರಿಸ್ಥಿತಿ ಅಡಕತ್ತರಿಯಲ್ಲಿ ಸಿಲುಕಿದಂತಾಗಿದೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ