B.J.P.ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವುದೆಂದರೆ ಭೂತದ ಬಾಯಿಯಲ್ಲಿ ಭಗವದ್ಗೀತೆ ಉಲಿದಂತೆ:ಶಂಕರಗೌಡ ಪಾಟೀಲ

Spread the love

ಬೆಳಗಾವಿ  : ಬೆಳಗಾವಿ : ಭಾರತೀಯ ಜನತಾ ಪಾರ್ಟಿಯವರು ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವುದೆಂದರೆ ಭೂತದ ಬಾಯಿಯಲ್ಲಿ ಭಗವದ್ಗೀತೆ ಉಲಿದಂತೆ ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಂಕರಗೌಡ ಪಾಟೀಲ ಹೇಳಿದ್ದಾರೆ.
ಕುಟುಂಬ ರಾಜಕಾರಣ ಕುರಿತಂತೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಫ್ಲೆಕ್ಸ್ ಅಳವಡಿಸುತ್ತಿರುವ ಕುರಿತು ಹೇಳಿಕೆ ನೀಡಿರುವ ಅವರು, ರಾಷ್ಟ್ರ ರಾಜಕಾರಣದಿಂದ ಹಳ್ಳಿ ರಾಜಕಾರಣದವರೆಗೂ ಕುಟುಂಬ ರಾಜಕಾರಣವನ್ನೇ ಮಾಡಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಈ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಅವರದ್ದು ಕುಟುಂಬ ರಾಜಕಾರಣವಲ್ಲವೇ? ಈಶ್ವರಪ್ಪನವರದ್ದು ಕುಟುಂಬ ರಾಜಕಾರಣವಲ್ಲವೇ? ಬೊಮ್ಮಾಯಿಯವರದ್ದು ಕುಟುಂಬ ರಾಜಕಾರಣವಲ್ಲವೇ? ಉದಾಸಿಯವರದ್ದು ಕುಟುಂಬ ರಾಜಕಾರಣವಲ್ಲವೇ? ಸಿದ್ದೇಶ್ವರ ಅವರದ್ದು ಕುಟುಂಬ ರಾಜಕಾರಣವಲ್ಲವೇ? ಕತ್ತಿಯವರದ್ದು ಕುಟುಂಬ ರಾಜಕಾರಣವಲ್ಲವೇ? ಜಾರಕಿಹೊಳಿಯವರದ್ದು ಕುಟುಂಬ ರಾಜಕಾರಣವಲ್ಲವೇ? ಜೊಲ್ಲೆಯವರದ್ದು ಕುಟುಂಬ ರಾಜಕಾರಣವಲ್ಲವೇ? ಜೊತೆಗೆ, ಕುಟುಂಬ ರಾಜಕಾರಣವನ್ನೇ ಹೊದ್ದು ಮಲಗಿರುವ ಜಾತ್ಯತೀತ ಜನತಾದಳದೊಂದಿಗೆ ಸೇರಿಕೊಂಡು ಚುನಾವಣೆ ಎದುರಿಸುತ್ತಿರುವ ಬಿಜೆಪಿಯವರು ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಲಕ್ಷ್ಮೀ ಹೆಬ್ಬಾಳಕರ್ ಅವರು ಅತ್ಯಂತ ಕೆಳಮಟ್ಟದಿಂದ ರಾಜಕಾರಣದಲ್ಲಿ ಮೇಲೆ ಬಂದವರು. ಅವರ ಸಹೋದರರಾಗಿರುವ ಚನ್ನರಾಜ ಹಟ್ಟಿಹೊಳಿ ಹಾಗೂ ಮಗ ಮೃಣಾಲ ಹೆಬ್ಬಾಳಕರ್ ಅವರು ಕಳೆದ 10 ವರ್ಷಗಳಿಗಿಂತ ಹೆಚ್ಚಿನ ಸಮಯದಿಂದ ಕಾಂಗ್ರೆಸ್ ನಲ್ಲಿ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಸ್ವಂತ ಪ್ರತಿಭೆಯಿಂದ, ಹೋರಾಟದಿಂದ ಅವರು ರಾಜಕಾರಣದಲ್ಲಿ ಸ್ಥಾನ ಪಡೆದರೆ ಇದನ್ನು ಕುಟುಂಬ ರಾಜಕಾರಣ ಎನ್ನುವಂತೆ ಬಿಂಬಿಸುವುದು ಮೂರ್ಖತನದ ಪರಮಾವಧಿಯಲ್ಲದೆ ಇನ್ನೇನು ಎಂದು ಶಂಕರಗೌಡ ಪಾಟೀಲ ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

Bigg Boss ಸೀಸನ್​-11ಕ್ಕೆ ಎಂಟ್ರಿ ಪಡೆದ ನಾಲ್ವರು ಸ್ಫರ್ಧಿಗಳು

Spread the love ಬೆಂಗಳೂರು: ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್​ಬಾಸ್ (Bigg Boss)​ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿಯೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ