ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತ್ತಕೋತ್ತರ ಪದವಿ ಪಡೆದ ಪರಿಶಿಷ್ಠ ಪಂಗಡದ ನಿರುದ್ಯೋಗಿ ಯುವಕ, ಯುವತಿಯರು ಜಿಲ್ಲಾ ಅಥವಾ ತಾಲ್ಲೂಕು ಮಟ್ಟದಲ್ಲಿ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮ ಕ್ಷೇತ್ರಗಳಲ್ಲಿ ಉದ್ದಿಮೆ ಸ್ಥಾಪಿಸಲು ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
ಯುಟ್ಯೂಬ್ ಚಾನೆಲ್, ಸೋಶಿಯಲ್ ಮಿಡಿಯಾ ನ್ಯೂಸ್ ಪೇಜ್, ನ್ಯೂಸ್ ಆನ್‍ಲೈನ್ ಬ್ಲಾಗ್, ವೆಬ್ ಪೇಜ್, ಆನ್‍ಲೈನ್ ಜರ್ನಲಿಸಂ, ಮಾಧ್ಯಮಕ್ಕೆ ಸಂಬಂಧಿಸಿದ ತರಬೇತಿ ನಡೆಸುವವರು ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಮಾ.28ರ ಒಳಗಾಗಿ ಅರ್ಜಿ ಸಲ್ಲಿಸಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಉದ್ದಿಮೆ ಸ್ಥಾಪಿಸಲು ಘಟಕ ವೆಚ್ಚದ ಶೇ.70 ರಷ್ಟು ಅಥವಾ 5 ಲಕ್ಷ ರೂ.ಗಳಷ್ಟು ಸಹಾಯಧನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಸಂಪರ್ಕಿಸಬಹುದಾಗಿದೆ.