Breaking News
Home / ರಾಜಕೀಯ / ರಾಜ್ಯ ಸರ್ಕಾರದಿಂದ ಏ.1ರಿಂದ ಭಾನುವಾರವೂ ‘ಸಬ್ ರಿಜಿಸ್ಟ್ರಾರ್ ಕಚೇರಿ’ ತೆರೆಯಲು ಅಧಿಕೃತ ಆದೇಶ

ರಾಜ್ಯ ಸರ್ಕಾರದಿಂದ ಏ.1ರಿಂದ ಭಾನುವಾರವೂ ‘ಸಬ್ ರಿಜಿಸ್ಟ್ರಾರ್ ಕಚೇರಿ’ ತೆರೆಯಲು ಅಧಿಕೃತ ಆದೇಶ

Spread the love

ಬೆಂಗಳೂರು: ರಾಜ್ಯದಲ್ಲಿನ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ( sub-registrar’s office ) ಸಾರ್ವಜನಿಕರಿಗೆ ಮತ್ತಷ್ಟು ಜನಸ್ನೇಹಿ ಸೇವೆ ನೀಡಲು ಏಪ್ರಿಲ್.1ರಿಂದ ಭಾನುವಾರವೂ ಕಾರ್ಯನಿರ್ವಹಿಸುವಂತೆ ಸರ್ಕಾರ ಅಧಿಕೃತ ಆದೇಶ ಮಾಡಿದೆ.

ಈ ಕುರಿತಂತೆ ನೋಂದಣಿ ಮತ್ತು ಮುದ್ರಾಂಕದ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.

ಅದರಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಉತ್ತಮ ಸೇವೆಯನ್ನು ನೀಡುವ ಹಾಗೂ ಆಡಳಿತ ಸುಧಾರಣೆ ಮತ್ತು ಜನಸ್ನೇಹಿ ಆಡಳಿತಕ್ಕಾಗಿ ಪ್ರಾಯೋಗಿಕವಾಗಿ ಮೊದಲನೇ ಹಂತದಲ್ಲಿ ಮಾರ್ಚ್ 2024 ರಿಂದ ಪ್ರಾರಂಭಿಸುತ್ತಾ ಬೆಂಗಳೂರು ನಗರ ಜಿಲ್ಲೆಯ 5 ನೋಂದಣಿ ಜಿಲ್ಲೆಗಳಲ್ಲಿ ಪ್ರತಿ ಒಂದು ನೋಂದಣಿ ಜಿಲ್ಲೆಯಲ್ಲಿ ಒಂದು ಉಪ ನೋಂದಣಿ ಕಛೇರಿಯು ಪಾರದರ್ಶಕ ವಾರದ ಸರದಿಯ ಆಧಾರದ ಮೇಲೆ ಮತ್ತು ಬೆಂಗಳೂರು ಗ್ರಾಮಾಂತರ ನೋಂದಣಿ ಜಿಲ್ಲೆಯ ವ್ಯಾಪ್ತಿಯಲ್ಲಿನ ಉಪ ನೋಂದಣಿ ಕಛೇರಿಗಳ ಪೈಕಿ ಯಾವುದಾದರೂ ಒಂದು ಉಪ ನೋಂದಣಿ ಕಛೇರಿ ಪಾರದರ್ಶಕವಾದ ವಾರದ ಸರದಿಯ ಆಧಾರದ ಮೇಲೆ ಪ್ರತಿ ಭಾನುವಾರ ಕಾರ್ಯನಿರ್ವಹಿಸುವಂತೆ ಹಾಗೂ ಇದಕ್ಕೆ ಬದಲಾಗಿ ಆ ವಾರದ ಮಂಗಳವಾರದ ದಿನದಂದು ಸದರಿ ಕಛೇರಿಯು ಪರಿಹಾರವಾಗಿ ರಜೆಯನ್ನು ನೀಡಲು ಆದೇಶಿಸಿದೆ.


Spread the love

About Laxminews 24x7

Check Also

ಮೊಸಳೆಗಳಿವೆ ಎಚ್ಚರಿಕೆ!

Spread the love ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮನುಷ್ಯ ಮತ್ತು ಮೊಸಳೆಗಳ ಸಂಘರ್ಷ ಬೇಸಿಗೆಯಲ್ಲಿ ಅಧಿಕ. ಕೃಷ್ಣಾ ನದಿಯಲ್ಲಿ ನೀರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ