ಮೈಸೂರು : ಮೈಸೂರು ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪರಿಷತ್ತು ಜಂಟಿಯಾಗಿ ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಒಂದು ಸಮಾವೇಶದಲ್ಲಿ ಮಾತನಾಡಿ ಬಿಜೆಪಿ ಪಕ್ಷದ ಬಡವರಿಗೂ ಕೂಡ ಗ್ಯಾರಂಟಿ ಯೋಜನೆಗಳನ್ನ ತಲುಪಿಸುತ್ತಿದ್ದೇವೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳು ಎಲ್ಲಾ ಜಾತಿಯ ಬಡವರು, ಎಲ್ಲಾ ಧರ್ಮದ ಬಡವರು ಅವರೆಲ್ಲರಿಗೂ ಕೂಡ ಈ ಯೋಜನೆಗಳು ತಲುಪುವ ಕೆಲಸ ಮಾಡುತ್ತೇವೆ. ಭಾರತೀಯ ಜನತಾ ಪಕ್ಷದ ಬಡವರಿಗೂ ಕೂಡ ಕೊಡುತ್ತಿದ್ದೇವೆ. ನಾವು ಯಾವುದೇ ಧರ್ಮ ಜಾತಿ ಪಕ್ಷ ಪಂಗಡ ಎಂದು ಬೇಧ ಮಾಡುವುದಿಲ್ಲ ಸಮರದಲ್ಲಿರುವಂತಹ ಎಲ್ಲಾ ಮಹಿಳೆಯರು ಎಲ್ಲಾ ಬಡವರು ಅವರಿಗೆ ಸಹಾಯ ಮಾಡಬೇಕೆಂಬುದೇ ನಮ್ಮ ಗ್ಯಾರಂಟಿ ಯೋಜನೆಗಳ ಪ್ರಮುಖ ಉದ್ದೇಶವಾಗಿದೆ ಎಂದರು.
Laxmi News 24×7