ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಹೈಕೋರ್ಟ್ ಅಪೆಕ್ಸ್ ಬ್ಯಾಂಕ್ ಸಾಲ ಮರುಪಾವತಿ ಮಾಡದೇ ವಂಚನೆ ಪ್ರಕರಣದಲ್ಲಿ ಬಿಗ್ ರಿಲೀಫ್ ನೀಡಿದೆ. ಅದೇ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸದಂತೆ ಹೈಕೋರ್ಟ್ ಸಿಐಡಿಗೆ ಸೂಚಿಸಿದೆ.
ಇಂದು ಅಪೆಕ್ಸ್ ಸಹಕಾರಿ ಬ್ಯಾಂಕ್ ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠವು ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ಎಸ್ಪಿಪಿ ಬ್ಯಾತ ಎನ್ ಜಗದೀಶ್ ಅವರು ರಮೇಶ್ ಜಾರಕಿಹೊಳಿಯವರು ಸಿಐಡಿ ನೋಟಿಸ್ ನೀಡಿದರೂ ವಿಚಾರಣೆ ಹಾಜರಾಗುತ್ತಿಲ್ಲ ಎಂಬುದಾಗಿ ನ್ಯಾಯಪೀಠದ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಕೋರ್ಟ್ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ತನಿಖೆಗೆ ಸಹಕರಿಸಬೇಕು. ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತು. ಅಲ್ಲದೇ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸದಂತೆ ಸೂಚಿಸಿತು.
Laxmi News 24×7