ದಾಂಡೇಲಿ : ನಗರದ ಕುಳಗಿ ರಸ್ತೆಯ ಬದಿಯಲ್ಲಿ ನಿಂತಿದ್ದ ಕಾರಿನ ಮೇಲೆ ಮರವೊಂದು ಉರುಳಿ ಬಿದ್ದು ಕಾರುಗಳೆರಡು ಜಖಂಗೊಂಡಿದ್ದಲ್ಲದೇ, ಅದೇ ರಸ್ತೆಯಲ್ಲಿ ಹೋಗುತ್ತಿದ್ದ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯವಾದ ಘಟನೆ ಶುಕ್ರವಾರ ನಡೆದಿದೆ.
ಕುಳಗಿ ರಸ್ತೆಯ ಬದಿಯಲ್ಲಿದ್ದ ಮರವೊಂದು ಅಲ್ಲೇ ನಿಂತಿದ್ದ ಎರಡು ಕಾರುಗಳ ಮೇಲೆ ಉರುಳಿ ಬಿದ್ದಿದೆ.
ಇದೇ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಹೋಗುತ್ತಿದ್ದ ದ್ವಿಚಕ್ರ ವಾಹನದ ಮೇಲೆಯೂ ಮರ ಬಿದ್ದ ಪರಿಣಾಮವಾಗಿ ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯವಾಗಿದೆ.
ಘಟನೆಯಲ್ಲಿ ಕಾರುಗಳೆರಡು ಜಖಂಗೊಂಡಿದೆ. ತಕ್ಷಣವೇ ಸ್ಥಳೀಯರು ಗಾಯಾಳುವನ್ನು ಸಾರ್ವಜನಿಕ ಆಸ್ಪತ್ರೆಯ ಆಂಬುಲೆನ್ಸ್ ಮೂಲಕ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಿದ್ದಾರೆ. ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.