Breaking News
Home / Madikeri / ಕೆಲಸ ಮಾಡಿದ ಕೂಲಿಯನ್ನೂ ಉದ್ಯಾನ ಅಭಿವೃದ್ಧಿಗೆ ವಿನಿಯೋಗ ನೀಡಿದ ಯುವಕರು

ಕೆಲಸ ಮಾಡಿದ ಕೂಲಿಯನ್ನೂ ಉದ್ಯಾನ ಅಭಿವೃದ್ಧಿಗೆ ವಿನಿಯೋಗ ನೀಡಿದ ಯುವಕರು

Spread the love

ಮಡಿಕೇರಿ: ಉದ್ಯೋಗ ಖಾತ್ರಿ ಯೋಜನೆಯಡಿ ಜನರಿಂದ ಕೆಲಸಗಳನ್ನು ಮಾಡಿಸುವುದಕ್ಕಿಂತ ಯಂತ್ರೋಪಕರಣಗಳ ಬಳಸಿ ಕಾಮಗಾರಿ ಮಾಡಿಸುವವರೇ ಹೆಚ್ಚು. ಆದರೆ ಇಲ್ಲೊಂದು ಪಂಚಾಯಿತಿಯಲ್ಲಿ ಉದ್ಯೋಗ ಖಾತ್ರಿ ಅನುದಾನವನ್ನು ಬಳಸಿ ಶಾಲೆ, ಅಂಗನವಾಡಿಗಳ ಉದ್ಯಾನವನ್ನು ಅಭಿವೃದ್ಧಿ ಮಾಡಲಾಗಿದೆ. ಈ ಶಾಲೆಗಳು ಇದೀಗ ಖಾಸಗಿ ಶಾಲೆಗಳಿಗಿಂತಲೂ ಅಚ್ಚುಕಟ್ಟಾಗಿವೆ.ಕೊರೊನಾ ಲಾಕ್‍ಡೌನ್‍ನಿಂದ ಜನರು ದುಡಿಮೆ ಇಲ್ಲದೆ ಪರದಾಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮೇಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿ ಜನರಿಗೆ ತಮ್ಮ ಊರುಗಳಲ್ಲೇ ಸರ್ಕಾರಿ ಶಾಲೆ ಮತ್ತು ಅಂಗನವಾಡಿಗಳ ಉದ್ಯಾನವನಗಳನ್ನು ಅಭಿವೃದ್ಧಿಪಡಿಸುವ ಕೆಲಸ ನೀಡಲಾಗಿತ್ತು.

ಮೇಕೇರಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಶುಭಾಷ್ ನಗರದ ಅಂಗನವಾಡಿ ಮತ್ತು ಹಾಕತ್ತೂರಿನ ಪ್ರೌಢಶಾಲೆ ಮೂರನ್ನು ತಲಾ 3 ಲಕ್ಷ ರೂ.ಗಳ ಅನುದಾನ ಬಳಸಿ ಉದ್ಯಾನವನ್ನು ಅಚ್ಚುಕಟ್ಟಾಗಿ ಅಭಿವೃದ್ಧಿಗೊಳಿಸಲಾಗಿದೆ. ಉದ್ಯಾನವಕ್ಕೆ ಆಧುನಿಕ ಸ್ಪರ್ಶ ನೀಡಲಾಗಿದ್ದು, ಹಲವು ಬಗೆಯ ಹೂಗಿಡಗಳು, ಅಲಂಕಾರಿಕ ಗಿಡಗಳನ್ನು ನೆಡಲಾಗಿದೆ. ಉದ್ಯಾನವನದ ದಾರಿಗಳಿಗೆ ಇಂಟರ್‍ಲಾಕ್ ಗಳನ್ನು ಅಳವಿಡಿಸಿ ಸ್ವಚ್ಛವಾಗಿರುವಂತೆ ಮಾಡಲಾಗಿದೆ. ಉದ್ಯಾನವನಕ್ಕೆ ಸ್ಪಿಂಕ್ಲರ್ ಗಳನ್ನು ಸಹ ಅಳವಡಿಸಿ ನೀರಾವರಿ ವ್ಯವಸ್ಥೆ ಮಾಡಲಾಗಿದೆ. ಅಂಗನವಾಡಿಯಲ್ಲಿಯೂ ಉದ್ಯಾನದ ಜೊತೆಗೆ ಮಕ್ಕಳ ಆಟದ ಸಾಮಾಗ್ರಿಗಳನ್ನು ಅಳವಡಿಸಿ ಮಕ್ಕಳನ್ನು ಸೆಳೆಯುವಂತೆ ಮಾಡಲಾಗಿದೆ.


Spread the love

About Laxminews 24x7

Check Also

ಉಗ್ರನಿಂದ ಬಾಂಬ್‌ ಸ್ಫೋಟದ ಬೆದರಿಕೆ ಬಂದಿದೆ ಎಂದವನ ವಿರುದ್ಧ ಎಫ್‌ಐಆರ್‌

Spread the loveಬೆಂಗಳೂರು: ಬಸವೇಶ್ವರ ನಗರದ ಖಾಸಗಿ ಶಾಲೆಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಬಂದ ಬೆನ್ನಲ್ಲೇ ಪಾಕಿಸ್ತಾನದ ಉಗ್ರನೊಬ್ಬ ಬೆಂಗಳೂರಿನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ