Breaking News

ಕೃಷ್ಣಾ ನದಿಗೆ ನೀರು ಹರಿಸಲು ಕೇಂದ್ರಕ್ಕೆ ಒತ್ತಡ

Spread the love

ಮಖಂಡಿ: ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅಂದಾಜು 26 ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.

ನಗರದ ವಿವಿಧ ಕಾಲೊನಿಗಳಲ್ಲಿ  ನಡೆದ ನಗರೋಥ್ಥಾನ ಯೋಜನೆ ಅನುದಾನದಡಿಯಲ್ಲಿ ₹2.90 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಜಮಖಂಡಿ: ಕೃಷ್ಣಾ ನದಿಗೆ ನೀರು ಹರಿಸಲು ಕೇಂದ್ರಕ್ಕೆ ಒತ್ತಡ

 

‘ಸರ್ಕಾರದಿಂದ ಬರುವ ಅನುದಾನದಲ್ಲಿ ನಗರದ ಜನತೆಗೆ ಮೂಲ ಸೌಲಭ್ಯ ಕಲ್ಪಿಸಲಾಗುತ್ತಿದೆ, ಹಂತ ಹಂತವಾಗಿ ಅಭಿವೃದ್ದಿ ಪಡಿಸಲಾಗುವುದು’ ಎಂದರು.

‘ಕೃಷ್ಣಾ ನದಿಗೆ ನೀರು ಹರಿಸುವಂತೆ ವಿರೋಧ ಪಕ್ಷದ ನಾಯಕರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಬರುವ ದಿನಗಳಲ್ಲಿ ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರು ಹರಿಸುವ ನಿಟ್ಟಿನಲ್ಲಿ ಒತ್ತಡ ತರಲಾಗುವುದು’ ಎಂದು ತಿಳಿಸಿದರು.

ಪೌರಾಯುಕ್ತೆ ಲಕ್ಷ್ಮೀ ಅಷ್ಟಗಿ, ಅಜಯ ಕಡಪಟ್ಟಿ, ಯಮನೂರ ಮೂಲಂಗಿ, ರಾಜೇಸಾಬ ಕಡಕೋಳ, ವಿಶ್ವಾಸ ಪಾಟೀಲ, ಶಿವಕುಮಾರ ನಾಯಕ, ಶ್ರೀಧರ ಕಂಬಿ, ಸಾವಿತ್ರಿ ಗೊರನಾಳ, ಸಿ.ಎನ್.ರುದ್ರಸ್ವಾಮಿಮಠ ಇದ್ದರು.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ