Breaking News

ಕೆಕೆಆರ್‌ಟಿಸಿ ಅಧ್ಯಕ್ಷರಾಗಿ ಎಂ.ವೈ. ಪಾಟೀಲ ನೇಮಕ

Spread the love

ಲಬುರಗಿ: ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಹಾಗೂ ನೆರೆಯ ವಿಜಯಪುರ ಜಿಲ್ಲೆಯ ವ್ಯಾಪ್ತಿಯನ್ನು ಹೊಂದಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರನ್ನಾಗಿ ಅಫಜಲಪುರ ಶಾಸಕ ಎಂ.ವೈ. ಪಾಟೀಲ ಅವರನ್ನು ನೇಮಕ ಮಾಡಿ ಶುಕ್ರವಾರ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

 

ಆ ಮೂಲಕ ಸಚಿವ ಸ್ಥಾನ ಹಾಗೂ ನಿಗಮ ಮಂಡಳಿಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿಯೇ ಕಲಬುರಗಿ ಜಿಲ್ಲೆಗೆ ಸಿಂಹ ಪಾಲು ದೊರೆತಂತಾಗಿದೆ.

ಹಿರಿಯ ಶಾಸಕರಾಗಿರುವ ಎಂ.ವೈ. ಪಾಟೀಲ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರಾದರೂ ಸಂಪುಟದಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಸರ್ಕಾರ ರಚನೆಯಾಗಿ 9 ತಿಂಗಳಾದ ಬಳಿಕ ಕೆಕೆಆರ್‌ಟಿಸಿ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ.

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅಧ್ಯಕ್ಷರಾಗಿದ್ದರು.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ