Breaking News

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ವಾ? ಸೇರಿಸೋದು ಹೇಗೆ? ಇಲ್ಲಿದೆ ವಿವರ

Spread the love

ವದೆಹಲಿ(ಮಾ.16): 2024 ರ ಲೋಕಸಭಾ ಚುನಾವಣೆಗೆ ದೇಶದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಲೋಕಸಭೆ ಎಲೆಕ್ಷನ್ ದಿನಾಂಕ ಘೋಷಣೆಗೂ ಮುನ್ನವೇ ಎಲ್ಲಾ ರಾಜ್ಯಗಳಲ್ಲಿ ರಾಜಕೀಯ ಪಕ್ಷಗಳು ಸಕ್ರಿಯಗೊಂಡಿವೆ. ಮತದಾನ ಎಂಬುದು ದೇಶದ ಪ್ರಜೆಯ ಮೂಲಭೂತ ಹಕ್ಕು. ಪ್ರತಿಯೊಬ್ಬ ಭಾರತೀಯ ತನ್ನ ಹಕ್ಕು ಚಲಾಯಿಸಬೇಕು.ನಿಮ್ಮ ಹಕ್ಕು ನೀವು ಚಲಾಯಿಸಬೇಕೆಂದರೆ ನಿಮ್ಮ ಹೆಸರು ಚುನಾವಣಾ ಆಯೋಗದ ಮತದಾರರ ಪಟ್ಟಿಯಲ್ಲಿ ದಾಖಲಾಗಿರಬೇಕು. ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಕೂಡಲೇ ನೀವು ಚುನಾವಣಾ ಆಯೋಗದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿ.

 

ಮತದಾರರ ಪಟ್ಟಿಯಲ್ಲಿ ಹೇಗೆ ಹೆಸರು ಸೇರಿಸುವುದು ಎಂಬ ಬಗ್ಗೆ ಹಂತ-ಹಂತವಾಗಿ ಮಾಹಿತಿ ಇಲ್ಲಿದೆ. ಈ ಕೆಳಗಿನ ವಿಧಾನಗಳನ್ನು ಅನುಸರಿಸಿದರೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನಿಮ್ಮ ಹಕ್ಕು ಚಲಾಯಿಸಬಹುದು.

1. ನಿಮ್ಮ ಅರ್ಹತೆಯನ್ನು ಪರಿಶೀಲಿಸಿ: ಮತದಾರರ ಪಟ್ಟಿಯಲ್ಲ ಹೆಸರು ನೋಂದಾಯಿಸುವ ಮೊದಲು ನೀವು ಅದಕ್ಕೆ ಅರ್ಹರಿದ್ದೀರಾ ಇಲ್ಲವೋ ಎಂದು ಖಚಿತಪಡಿಸಿಕೊಳ್ಳಬೇಕು. ಹಕ್ಕು ಚಲಾಯಿಸಲು ನಿಮಗೆ 18 ವರ್ಷ ವಯಸ್ಸಾಗಿರಬೇಕು.
ಮತದಾರರ ಪಟ್ಟಿಯನ್ನು ಪರಿಷ್ಕರಿಸಿದ ವರ್ಷದ ಜನವರಿ 1 ರಿಂದ 18 ವರ್ಷ ಅಥವಾ ಅದಕ್ಕಿಂತ ಹೆಚ್ಚು ವಯಸ್ಸಿನ ಭಾರತೀಯರಾಗಿರಬೇಕು ಮತ್ತು ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹರಾಗಬಾರದು. ನಿಮ್ಮ ವಯಸ್ಸು ಸರಿಯಾಗಿದೆಯೇ ಎಂಬ ಬಗ್ಗೆ ಅರಿತುಕೊಳ್ಳಿ.

2. ಆನ್‌ಲೈನ್ ನೋಂದಣಿ: ಚುನಾವಣಾ ಆಯೋಗವು ಆನ್‌ಲೈನ್ ನೋಂದಣಿ ಸೌಲಭ್ಯಗಳನ್ನು ಪರಿಚಯಿಸುವ ಮೂಲಕ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಿದೆ. ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್ (NVSP) ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಮತದಾರರ ಸಹಾಯವಾಣಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿ.

3. ಅರ್ಜಿ ಸಲ್ಲಿಕೆ: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಸೇರಿಸಲು ಆನ್‌ಲೈನ್ ಫಾರ್ಮ್ 6 ಅನ್ನು ಭರ್ತಿ ಮಾಡಬೇಕು. ಈ ಅರ್ಜಿಯಲ್ಲಿ ಹೆಸರು, ಹುಟ್ಟಿದ ದಿನಾಂಕ, ವಿಳಾಸ ಸೇರಿದಂತೆ ನಿಖರವಾದ ವೈಯಕ್ತಿಕ ವಿವರಗಳು ಹಾಗೂ ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು.

4. ಡಾಕ್ಯುಮೆಂಟ್ ಪರಿಶೀಲನೆ: ನೋಂದಣಿ ಪ್ರಕ್ರಿಯೆಯಲ್ಲಿ ಅಪ್‌ಲೋಡ್ ಮಾಡಲಾದ ಎಲ್ಲಾ ದಾಖಲೆಗಳು ಮಾನ್ಯವಾಗಿದೆ ಎಂದು ಖಚಿತಪಡಿಸಿಕೊಳ್ಳಿ. ದಾಖಲೆಗಳಲ್ಲಿ ಆಧಾರ್ ಕಾರ್ಡ್, ಪಾಸ್‌ಪೋರ್ಟ್, ಡ್ರೈವಿಂಗ್ ಲೈಸೆನ್ಸ್ ಅಥವಾ ಸರ್ಕಾರ ನೀಡಿದ ಗುರುತಿನ ಚೀಟಿ ಇರುತ್ತದೆ.

5. ಸ್ಥಳ ಪರಿಶೀಲನೆ: ನಿಮ್ಮ ಅರ್ಜಿಯನ್ನು ಸಲ್ಲಿಸಿದ ನಂತರ, ಒದಗಿಸಿದ ಮಾಹಿತಿಯನ್ನು ಪರಿಶೀಲಿಸಲು ಬೂತ್ ಮಟ್ಟದ ಅಧಿಕಾರಿ (BLO) ಸ್ಥಳ ಪರಿಶೀಲನೆ ನಡೆಸುತ್ತಾರೆ. ಪರಿಶೀಲನಾ ಪ್ರಕ್ರಿಯೆಯ ಸಮಯದಲ್ಲಿ ನೀವು ಅದೇ ವಿಳಾಸದಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು.

6. ಅಪ್ಲಿಕೇಶನ್ ಟ್ರ್ಯಾಕ್ : NVSP ವೆಬ್‌ಸೈಟ್ ಅಥವಾ ಮತದಾರರ ಸಹಾಯವಾಣಿ ಅಪ್ಲಿಕೇಶನ್ ಮೂಲಕ ನಿಮ್ಮ ಅಪ್ಲಿಕೇಶನ್ ಸ್ಥಿತಿಯನ್ನು ಟ್ರ್ಯಾಕ್ ಮಾಡಿ. ನಿಮ್ಮ ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಸಹಾಯ ಅಥವಾ ಪ್ರಶ್ನೆಗಳಿಗೆ ನೀವು ಚುನಾವಣಾ ಆಯೋಗದ ಸಹಾಯವಾಣಿಯನ್ನು ಸಹ ಸಂಪರ್ಕಿಸಬಹುದು.

7. ತಿದ್ದುಪಡಿ ಮತ್ತು ನವೀಕರಣಗಳು: ನಿಮ್ಮ ಮತದಾರರ ಮಾಹಿತಿಯಲ್ಲಿ ಯಾವುದೇ ದೋಷಗಳು ಅಥವಾ ಬದಲಾವಣೆಗಳ ಮಾಡಬೇಕಾದ ಸಂದರ್ಭದಲ್ಲಿ, ನೀವು ಯಾವುದನ್ನು ತಿದ್ದುಪಡಿ ಮಾಡಬೇಕೆಂಬ ಮಾಹಿತಿ ಮೇಲೆ ಫಾರ್ಮ್ 8, ಫಾರ್ಮ್ 8 ಎ ಅನ್ನು ಆಯ್ಕೆ ಮಾಡಿಕೊಳ್ಳಬಹುದು. ನಂತರ ತಿದ್ದುಪಡಿ ಮಾಹಿತಿ ಸರಿಪಡಿಸಬಹುದು.

8. ದಾಖಲಾತಿ ಕೇಂದ್ರಗಳು: ನೀವು ನೇರವಾಗಿ ಹತ್ತಿರದ ಚುನಾವಣಾ ನೋಂದಣಿ ಅಧಿಕಾರಿ (ERO) ಕಚೇರಿ ಅಥವಾ ಮತದಾರರ ಅನುಕೂಲ ಕೇಂದ್ರ (VFC) ಕ್ಕೆ ಭೇಟಿ ನೀಡಿಯೂ ಅರ್ಜಿ ಸಲ್ಲಿಸಬಹುದು.

9. ಅಂತಿಮ ದಿನಾಂಕ ತಿಳಿದುಕೊಳ್ಳಿ: ಚುನಾವಣಾ ದಿನಾಂಕದ ಕೆಲವು ವಾರಗಳ ಮೊದಲು ಸಾಮಾನ್ಯವಾಗಿ ನಿಗದಿಪಡಿಸಲಾದ ಮತದಾರರ ಪಟ್ಟಿಯಲ್ಲಿ ದಾಖಲಾತಿಗಾಗಿ ಅಂತಿಮ ದಿನಾಂಕದ ಬಗ್ಗೆ ಗಮನದಲ್ಲಿಟ್ಟುಕೊಳ್ಳಬೇಕು.

ಮತದಾರರ ಪಟ್ಟಿಯಲ್ಲಿ ನಿಮ್ಮನ್ನು ನೀವು ನೋಂದಾಯಿಸಿಕೊಳ್ಳುವ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸ್ನೇಹಿತರು, ಕುಟುಂಬದವರು ಸೇರಿದಂತೆ ಎಲ್ಲರನ್ನು ಪ್ರೋತ್ಸಾಹಿಸಿ.

ಈ ಸರಳ ಹಂತಗಳನ್ನು ಅನುಸರಿಸುವ ಮೂಲಕ, ನೀವು ಲೋಕಸಭೆ ಚುನಾವಣೆ 2024 ರಲ್ಲಿ ನಿಮ್ಮ ಮತದಾನದ ಹಕ್ಕನ್ನು ಜವಾಬ್ದಾರಿಯುತವಾಗಿ ಚಲಾಯಿಸಿ.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ