ಬೆಂಗಳೂರು: ಲೋಕಸಭಾ ಚುನಾವಣೆ (Lok sabha Election 2024) ಜೊತೆಯಲ್ಲಿ 26 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ (By Election) ನಡೆಯಲಿದೆ. ಏಳು ಹಂತಗಳಲ್ಲಿ ಉಪ ಚುನಾವಣೆ ನಡೆಯಲಿದೆ. 26 ವಿಧಾನಸಭಾ ಕ್ಷೇತ್ರಗಳ ಪೈಕಿ ಕರ್ನಾಟಕದ (Karnataka) ಒಂದು ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.
ಸುರಪುರ (Surapur By Election) ಶಾಸಕ ರಾಜಾ ವೆಂಕಟಪ್ಪ ನಾಯಕ್ (Raja Venkatappa Naik) ಅಕಾಲಿಕ ನಿಧನ ಹಿನ್ನೆಲೆ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಮೇ 7ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.
ರಾಜಾ ವೆಂಕಟಪ್ಪ ನಾಯಕ್ ಪುತ್ರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕಳೆದ ಬಿಜೆಪಿಯಿಂದ ಸೋತಿದ್ದ ರಾಜು ಗೌಡ (ರಾಜ ನರಸಿಂಹ ನಾಯಕ್) ಅವರೇ ಮತ್ತೆ ಕಮಲ ಚಿಹ್ನೆ ಅಡಿಯಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳಿವೆ.
ನಾಲ್ಕು ಬಾರಿ ಶಾಸಕರಾಗಿದ್ರು ರಾಜಾ ವೆಂಕಟಪ್ಪ ನಾಯಕ್
ಅನಾರೋಗ್ಯದಿಂದ ಬಳಲುತ್ತಿದ್ದ ರಾಜಾ ವೆಂಕಟಪ್ಪ ನಾಯಕ್ ಫೆಬ್ರವರಿ 25ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ನಾಲ್ಕು ಬಾರಿ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರನ್ನು ಈ ಬಾರಿ ಉಗ್ರಣ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು.
ವಾಲ್ಮೀಕಿ ಸಮುದಾಯದ ಪ್ರಬಲ ನಾಯಕ
ಸುರಪುರದ ಶಾಸಕರೂ ವಾಲ್ಮೀಕಿ ನಾಯಕ ಸಮುದಾಯದಿಂದ ರಾಜಾ ವೆಂಕಟಪ್ಪ ನಾಯಕ ಅವರು ಈ ಬಾರಿ ಕಲ್ಯಾಣ ಕರ್ನಾಟಕದಲ್ಲಿ ಅದರಲ್ಲೂ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ಹಿರಿಯ ಶಾಸಕರಾಗಿದ್ದರು.
ಕರ್ನಾಟಕದಲ್ಲಿ 2 ಹಂತಗಳಲ್ಲಿ ಎಲೆಕ್ಷನ್!
ಕರ್ನಾಟಕದಲ್ಲಿ ಒಟ್ಟು 2 ಹಂತಗಳಲ್ಲಿ ಎಲೆಕ್ಷನ್ ನಡೆಯಲಿದೆ. ಜೊತೆಗೆ ಒಂದು ಕ್ಷೇತ್ರಕ್ಕೆ ಉಪ ಚುನಾವಣೆ ಕೂಡ ನಡೆಯಲಿದೆ. ರಾಜ್ಯದಲ್ಲಿ ಒಟ್ಟೂ 28 ಕ್ಷೇತ್ರಗಳಿದ್ದು, 2 ಹಂತಗಳಲ್ಲಿ ಎಲೆಕ್ಷನ್ ನಡೆಸುವುದಾಗಿ ಚುನಾವಣಾ ಆಯೋಗ ಹೇಳಿದೆ.
ಏಪ್ರಿಲ್ 26 ಮತ್ತು ಮೇ 7ರಂದು ಚುನಾವಣೆ
ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್ 26, ಶುಕ್ರವಾರದಂದು ನಡೆಯಲಿದೆ. ಎರಡನೇ ಹಂತದ ಚುನಾವಣೆ ಮೇ 7, ಮಂಗಳವಾರದಂದು ನಡೆಯಲಿದೆ.
ಲೋಕಸಮರದಲ್ಲಿ 97 ಕೋಟಿ ಮತದಾರರು!
ಈ ಬಾರಿ ಸುಮಾರು 97 ಕೋಟಿ ಮತದಾರರು ಲೋಕಸಭೆ ಚುನಾವಣೆಯಲ್ಲಿ ಭಾಗವಹಿಸಲಿದ್ದಾರೆ. ದೇಶಾದ್ಯಂತ 10.5 ಲಕ್ಷ ಮತಗಟ್ಟೆಗಳಲ್ಲಿ55 ಲಕ್ಷ ಇವಿಎಂಗಳನ್ನು ಬಳಸಲಾಗುವುದು, ಜೊತೆಗೆ ಚುನಾವಣಾ ಪ್ರಕ್ರಿಯೆಗೆ 4 ಲಕ್ಷ ವಾಹನ, 1.8 ಕೋಟಿ ಚುನಾವಣಾ ಸಿಬ್ಬಂದಿ ಕೆಲಸ ಮಾಡಲಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.