ಬೆಂಗಳೂರು: ನಗರದಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಬಹುನಿರೀಕ್ಷಿತ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಪಂದ್ಯಾವಳಿಗಳನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಚಿಂತನೆ ನಡೆಸಿದ್ದು ಯಾವುದೇ ಕಾರಣಕ್ಕೂ ಸ್ಥಳಾಂತರಿಸಬಾರದು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.
ಐಪಿಎಲ್ ಪಂದ್ಯಗಳು ಬೆಂಗಳೂರಿನಿಂದ ಬೇರೆ ರಾಜ್ಯಕ್ಕೆ ಸ್ಥಳಾಂತರವಾಗುವ ಹಿನ್ನೆಲೆ ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಮುಖ್ಯದ್ವಾರ ಬಳಿ ಕನ್ನಡ ಚಳವಳಿ ವಾಟಾಳ್ ಪಕ್ಷ ನೇತೃತ್ವದ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಮಾತನಾಡಿದ ಅವರು, ಒಂದು ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ 17ನೇ ಆವೃತ್ತಿಯ ಐಪಿಎಲ್ ನಡೆಸದೆ ಹೋದರೆ ಕರ್ನಾಟಕ ಬಂದ್ ಮಾಡುವುದಾಗಿ ಖಡಕ್ ಎಚ್ಚರಿಕೆ ನೀಡಿದರು.
ಬೆಂಗಳೂರಿನಲ್ಲಿ ಜಲಕ್ಷಾಮ ಶುರುವಾಗಿದ್ದರಿಂದ ಕ್ರಿಕೆಟ್ ಮ್ಯಾಚ್ ಬೇರೆ ರಾಜ್ಯಕ್ಕೆ ಶಿಫ್ಟ್ ಮಾಡಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಚಿಂತನೆ ನಡೆಸಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಐಪಿಎಲ್ ಮ್ಯಾಚ್ ಹೊರ ರಾಜ್ಯಕ್ಕೆ ಸ್ಥಳಾಂತರ ಬೇಡ. ಐಪಿಎಲ್ ಪಂದ್ಯಗಳನ್ನ ಬೆಂಗಳೂರಿನಿಂದ ಸ್ಥಳಾಂತರ ಮಾಡದಂತೆ ಒತ್ತಾಯ ಮಾಡಿದರು.