Breaking News

ಸ್ಪರ್ಧೆ ಖಚಿತ ಎಂದು ಪುನರುಚ್ಚರಿಸಿದ ಈಶ್ವರಪ್ಪ

Spread the love

ಸಾಗರ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುತ್ತೇವೆ ಎಂದು ಶುಕ್ರವಾರ ಘೋಷಣೆ ಮಾಡಿದ್ದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಶನಿವಾರ ಸಾಗರಕ್ಕೆ ಭೇಟಿ ನೀಡಿ ಪ್ರಮುಖರ ಮನೆ ಹಾಗೂ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದರು.

ಶೃಂಗೇರಿ ಶಂಕರಮಠದಲ್ಲಿ ಪೂಜೆ ಸಲ್ಲಿಸಿ, ಬ್ರಾಹ್ಮಣ ಸಮಾಜದ ಪ್ರಮುಖರಾದ ಮ.ಸ.ನಂಜುಂಡಸ್ವಾಮಿ ಅವರ ಮನೆಗೆ ಭೇಟಿ ನೀಡಿ ಪ್ರಮುಖರ ಜೊತೆ ಮಾತುಕತೆ ನಡೆಸಿದರು.

 

ಈ ಸಂದರ್ಭದಲ್ಲಿ ಮಾತನಾಡಿದ ನಂಜುಂಡಸ್ವಾಮಿ, ಬಿಜೆಪಿ ಪ್ರಮುಖರಾದ ಕೆ.ಎಸ್.ಈಶ್ವರಪ್ಪ ಅವರಿಗೆ ಅನ್ಯಾಯವಾಗಿರುವ ಈ ಹೊತ್ತಿನಲ್ಲಿ ನಾವು ಅವರ ಜೊತೆ ನಿಲ್ಲುತ್ತೇವೆ. ಈಶ್ವರಪ್ಪ ಅವರು ಯಾವುದೇ ನಿರ್ಧಾರ ತೆಗೆದುಕೊಳ್ಳುವಾಗ ತಮ್ಮ ಹಾಗೂ ಮಗನ ಭವಿಷ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.

Shivamogga Lok Sabha constituency; ಸ್ಪರ್ಧೆ ಖಚಿತ ಎಂದು ಪುನರುಚ್ಚರಿಸಿದ ಈಶ್ವರಪ್ಪ

ನಂತರ ವರದಹಳ್ಳಿಯ ಶ್ರೀಧರಾಶ್ರಮಕ್ಕೆ ಭೇಟಿ ನೀಡಿ ಶ್ರೀಧರ ಸ್ವಾಮಿಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಈಶ್ವರಪ್ಪ ಮಾತನಾಡಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಶುಕ್ರವಾರ ನಾನು ಪ್ರಮುಖರು ಹಾಗೂ ಅಭಿಮಾನಿಗಳ ಸಭೆಯಲ್ಲಿ ಘೋಷಣೆ ಮಾಡಿದ್ದೇನೆ. ನಂತರ ಅಭೂತಪೂರ್ವವಾದ ಬೆಂಬಲ ಎಲ್ಲ ಕಡೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಗರ ತಾಲೂಕಿಗೆ ಭೇಟಿ ನೀಡಿ ಚರ್ಚೆ ನಡೆಸಲಾಗಿದೆ.

ಹಿಂದೂ ಧರ್ಮ ಮತ್ತು ಭಾರತ ದೇಶವನ್ನು ವಿಶ್ವಗುರುವಾಗಿಸಬೇಕು ಎನ್ನುವ ಉದ್ದೇಶದಿಂದ ನಾನು ಸ್ಪರ್ಧೆ ಮಾಡುತ್ತಿದ್ದೇನೆ. ಎಲ್ಲರೂ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅಶೋಕ್ ಭಟ್, ಸುದರ್ಶನ್, ಎಸ್.ವಿ.ಕೃಷ್ಣಮೂರ್ತಿ, ವೈ.ಮೋಹನ್, ಎಸ್.ಎಲ್.ಮಂಜುನಾಥ್, ವಸಂತಕುಮಾರ್, ಗೋಪಾಲ್, ಟಿ.ವಿ.ಪಾಂಡುರಂಗ, ಗುಂಡಪ್ಪ, ಸತೀಶ್ ಗೌಡ, ಪರಮಾತ್ಮ, ಗಜಾನನ ಜೋಯ್ಸ್, ರಘುನಾಥ್, ಬದರಿನಾಥ್ ಇನ್ನಿತರರು ಹಾಜರಿದ್ದರು.


Spread the love

About Laxminews 24x7

Check Also

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಏಳು ಆರೋಪಿಗಳ ಪೈಕಿ ಇಬ್ಬರಿಗೆ ಶ್ಯೂರಿಟಿ ಸಿಕ್ಕಿಲ್ಲ.

Spread the loveಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿ ಜಾಮೀನು ಪಡೆದಿದ್ದ ಏಳು ಮಂದಿ ಆರೋಪಿಗಳ ಪೈಕಿ ಇಬ್ಬರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ