ಬೆಳಗಾವಿ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಪೊಲೀಸರು ಅಲರ್ಟ್ ಆಗಿದ್ದಾರೆ. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೊಂಡ ನಂತ್ರ, ಚುರುಕಾಗಿರೋ ಪೊಲೀಸರು ದಾಖಲೆಯಿಲ್ಲದೇ ಗೋಣಿಚೀಲದಲ್ಲಿ ತುಂಬಿಕೊಂಡು ಸಾಗಿಸುತ್ತಿದ್ದಂತ 2 ಲಕ್ಷ ಹಣವನ್ನು ಸೀಜ್ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಪೊಲೀಸರು ಲೋಕಸಭಾ ಚುನಾವಣೆ ಘೋಷಣೆಯ ನಂತ್ರ, ಚುನಾವಣಾ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಪಾಲಿಸೋ ಕ್ರಮವಹಿಸಿದ್ದಾರೆ.
ಬೆಳಗಾವಿಯ ಹಳ್ಳೂರು ಚೆಕ್ ಪೋಸ್ಟ್ ನಲ್ಲಿ ಆಲ್ಟೋ ಕಾರಿನಲ್ಲಿ ದಾಖಲೆಯಿಲ್ಲದೇ ಗೋಣಿಚೀಲದಲ್ಲಿ ತುಂಬಿಕೊಂಡು ಸಾಗಿಸುತ್ತಿದ್ದಂತ 2 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.