ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್‌ಎಸ್ ನಾಯಕಿ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರನ್ನು ಶನಿವಾರ ದೆಹಲಿ ಕೋರ್ಟ್ ಮಾರ್ಚ್ 23ರ ವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದೆ.
ನಿನ್ನೆ ಹೈದರಾಬಾದ್‌ನಲ್ಲಿರುವ ಬಿಆರ್ ಎಸ್ ಎಂಎಲ್ ಸಿ ಕೆ ಕವಿತಾ ಅವರ ನಿವಾಸದ ಮೇಲೆ ದಾಳಿ ನಡೆಸಿದೆ ಇಡಿ ಅಧಿಕಾರಿಗಳು, ಕೆಲವು ಗಂಟೆಗಳ ನಂತರ ಕೆಸಿಆರ್ ಪುತ್ರಿಯನ್ನು ಬಂಧಿಸಿ ದೆಹಲಿಗೆ ಕರೆದೊಯ್ದಿದ್ದರು. ಇಂದು ಅವರನ್ನು ಕವಿತಾ ಅವರನ್ನು ಇಡಿ ಪ್ರಕರಣಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.
ಆರೋಪಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಎಂ ಕೆ ನಾಗ್ಪಾಲ್ ಅವರು, ಜಾರಿ ನಿರ್ದೇಶನಾಲಯದ ಮನವಿಯ ಮೇರೆಗೆ ಕವಿತಾ ಅವರನ್ನು ಮಾರ್ಚ್ 23ರ ವರೆಗೆ ಇಡಿ ವಶಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ.